ಮಂಗಳೂರು: ನಾಳೆ ಚುನಾವಣಾ ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ.
ಮಂಗಳೂರು ನಗರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾನೂನು ಉಲ್ಲಂಘಿಸಿದರೆ ಅಥವಾ ವಿಜಯೋತ್ಸವ ಮಾಡಿದರೆ ಮುಲಾಜಿಲ್ಲದೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಇಂದು ಮಧ್ಯರಾತ್ರಿಯಿಂದ 16ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಾಗಿದ್ದು, ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ. ಜಿಲ್ಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದ ನಾಳೆ ಮಧ್ಯರಾತ್ರಿ ವರೆಗೂ ಮದ್ಯಮಾರಾಟವನ್ನು ಕೂಡ ನಿಷೇಧವಾಗಲಿದೆ ಅಂದ್ರು.
ಉಡುಪಿ
ಮೇ.15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮೇ 15ರ ಬೆಳಿಗ್ಗೆ ಗಂಟೆ 6 ರಿಂದ 17ರ ಬೆಳಿಗ್ಗೆ ಗಂಟೆ 6 ರವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು ಯಾವುದೇ ಸಭೆ ಸಮಾರಂಭ, ವಿಜಯೋತ್ಸವ, ಮೆರವಣಿಗೆ ಮಾಡುವುದು, ಪರ ಹಾಗೂ ವಿರೋಧ ಘೋಷಣೆ ಕೂಗುವುದು, ಗುಂಪು ಸೇರುವುದು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ನೀಡಿದ್ದಾರೆ.
ಗೆಲವು ಸಾಧಿಸಿದ ಹಾಗೂ ಸೋತ ಪಕ್ಷಗಳ ನಡುವೆ ಗೊಂದಲ ಉಂಟಾಗಿ ಗಲಭೆ ನಡೆಯುವ ಸಾಧ್ಯತೆಗಳಬಗ್ಗೆ ಉಡುಪಿ ಜಿಲ್ಲಾ ಎಸ್ಪಿ ನೀಡಿದ ವರದಿಯಂತೆ ಈ ಆದೇಶ ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…