ಮತ ಎಣಿಕೆ ಮುಗಿದ ಮಾರನೇ ದಿನ ಮೈತ್ರಿ ಸರ್ಕಾರ ಪತನ : ಬಿ.ಎಸ್.ಯಡಿಯೂರಪ್ಪ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್
ಶಿವಮೊಗ್ಗ: ಲೋಕಸಭಾ ಚುನಾವಣೆ ಮತಗಳ ಎಣಿಕೆ ಕಾರ್ಯ ಮುಗಿದ ಮಾರನೇ ದಿನವೇ ರಾಜ್ಯ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು ಪ್ರತಿ ಪಕ್ಷ ನಾಯಕರೂ ಆಗಿರುವ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ.
ಮತದಾನ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮತಗಳ ಎಣಿಕೆ ಕಾರ್ಯ ಮುಗಿದ ಮಾರನೇ ದಿನವೇ ರಾಜ್ಯ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಮೈತ್ರಿ ಸರ್ಕಾರ ವಿರುದ್ಧ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಅಸಮಧಾನಗೊಂಡಿದ್ದು, ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ ಇವರೆಲ್ಲ ಬಂಡಾಯ ಏಳಲಿದ್ದು, ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರ ನಿರಂತರ ತಮ್ಮ ಹಸ್ತಕ್ಷೇಪ,ಆಟಾಟೋಪಗಳಿಂದ  20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಆಕ್ರೋಶಗೊಂಡಿದ್ದು, ಮೇ 23ರ ಮತಗಳ ಎಣಿಕೆ ಕಾರ್ಯ ಮುಗಿದ ನಂತರ  “ಕೈ” ಶಾಸಕರೇ ಸರ್ಕಾರವನ್ನು ಮುಳುಗಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಶಿವಮೊಗ್ಗ ಹಾಗೂ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ಜಯಗಳಿಸಲಿದ್ದಾರೆ ಎಂದು ಭವಿಷ್ಯ ನುಡಿದರು