Featured

ಮತ ಕಳವು ದೇಶದ್ರೋಹಿ ಚಟುವಟಿಕೆ ; ಮೋದಿ ಸರ್ಕಾರ ಚುನಾವಣೆಗಳನ್ನು ಕಸಿದುಕೊಳ್ಳುತ್ತಿದೆ : ರಾಹುಲ್ ಗಾಂಧಿ ಆಕ್ರೋಶ – vishwanews24

ಮತ ಕಳವು ದೇಶದ್ರೋಹಿ ಚಟುವಟಿಕೆ ; ಮೋದಿ ಸರ್ಕಾರ ಚುನಾವಣೆಗಳನ್ನು ಕಸಿದುಕೊಳ್ಳುತ್ತಿದೆ : ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಮತಕಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ. ಮೋದಿ ಸರ್ಕಾರ ಚುನಾವಣೆಗಳನ್ನು ಕಸಿದುಕೊಳ್ಳುತ್ತಿದೆ ಎಂದು ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಲೋಕಸಭೆಯ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಚುನಾವಣಾ ಆಯೋಗ, ಸಿಬಿಐ, ಇಡಿಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಆರ್‌ಎಸ್‌ಎಸ್ ಚಿಂತನೆಗಳಿರುವ ಅಧಿಕಾರಿಗಳನ್ನು ಚುನಾವಣಾ ಆಯೋಗದಲ್ಲಿ ತುಂಬಲಾಗಿದೆ. ಸಾಂವಿಧಾನಿಕ ಸಂಸ್ಥೆಯ ಕಬ್ಜ ಮಾಡುವ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ಚುನಾವಣಾ ಮಾಹಿತಿ ಕೇಳಿದರೆ 45 ದಿನಗಳಲ್ಲೇ ಡಿಲಿಟ್ ಆಗಿದೆ ಎನ್ನುತ್ತಾರೆ. ನರೇಂದ್ರ ಮೋದಿ ಅವರಿಗೆ ಅನುಕೂಲ ಆಗುವಂತೆ 3-4 ತಿಂಗಳ ಕಾಲ ಪ್ರಚಾರಕ್ಕೆ ವೇಳಾಪಟ್ಟಿ ಮಾಡಲಾಗುತ್ತೆ. ಚುನಾವಣಾ ಸುಧಾರಣೆ ಸರಳ ಮತ್ತು ಸುಲಭ. ಆದರೆ ಸರ್ಕಾರಕ್ಕೆ ಇದನ್ನು ಮಾಡಲು ಮನಸಿಲ್ಲ. ಅದರ ಬದಲಿಗೆ ಕಬ್ಜ ಮಾಡುತ್ತಿದ್ದಾರೆ” ಎಂದು ಹೇಳಿದರು.

“ನಿಯಮಗಳನ್ನು ಬದಲಿಸುವ ಅಧಿಕಾರವನ್ನು ಮುಖ್ಯ ಆಯುಕ್ತರಿಗೆ ಕೊಡಿ. ನಾವು ಅಧಿಕಾರಕ್ಕೆ ಬಂದರೆ ನಾವು ಕಾನೂನು ಬದಲಾವಣೆ ಬದಲಾವಣೆ ಮಾಡುತ್ತೇವೆ. ಚುನಾವಣಾ ಆಯೋಗದ ಆಯುಕ್ತರ ನೇಮಕಾತಿ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಡೆ ಇಟ್ಟಿದ್ದು ಯಾಕೆ? ನಮ್ಮದು ದೊಡ್ಡ ಪ್ರಜಾಪ್ರಭುತ್ವ ಅಲ್ಲ, ಅತ್ಯಾದ್ಭುತ ಪ್ರಜಾಪ್ರಭುತ್ವ. ಮತ ಕಳವು ದೇಶದ್ರೋಹಿ ಚಟುವಟಿಕೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಲಕ್ಷಾಂತರ ನಕಲಿ ಮತದಾರರು ಏಕೆ ಇದ್ದಾರೆ ಎಂದು ಚುನಾವಣಾ ಆಯೋಗ ನನಗೆ ಹೇಳಿಲ್ಲ. ಈ ಪ್ರಶ್ನೆಗಳಿಗೆ ಚುನಾವಣಾ ಆಯೋಗದ ಬಳಿ ಉತ್ತರವಿಲ್ಲ. ಬಿಹಾರದಲ್ಲಿ ಎಸ್‌ಐಆರ್ ನಂತರ, 1.2 ಲಕ್ಷ ನಕಲಿ ಮತದಾರರು ಏಕೆ ಇದ್ದರು? ನೀವು ಸಂಸ್ಥೆಯನ್ನು ವಶಪಡಿಸಿಕೊಂಡಿದ್ದೀರಿ ಎಂಬುದು ಸ್ಪಷ್ಟವಾಗಿದೆ” ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

4 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

5 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

6 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

6 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago