ಕಾಪು: ರಾಜ್ಯ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘ ನಿ ಕಾಪು ಇದರ ಶತಮನೋತ್ಸವ ಸಮರೋಪವು ಕೋವಿಡ್ ನಿಯಮಗಳ ಅನುಸಾರ ಕೈಪುಂಜಾಲು ಕೇಂದ್ರ ಕಚೇರಿಯ ಬಳಿ (ಮಂಗಳವಾರ) ಇಂದು ಸಂಜೆ 4 ಗಂಟೆಗೆ ನಡೆಯಲಿದೆ.
ಶತಮನೋತ್ಸವ ಸಂಭ್ರಮದಲ್ಲಿರುವ ಈ ಸೊಸೈಟಿಯ ಪ್ರಧಾನ ಕಚೇರಿಯು ಹೂ ಅಲಂಕಾರದೊಂದಿಗೆ ಸಿಂಗಾರಗೊಂಡು ಗ್ರಾಹಕರನ್ನು ಮತ್ತು ಅತಿಥಿ ಅಭ್ಯಾಗತರನ್ನು ಸ್ವಾಗತಿಸಲು ಮದುವಣಗಿತ್ತಿಯಂತೆ ಸಿಂಗಾರಗೊಂಡು ಸ್ವಾಗತಿಸಲು ರೆಡಿಯಾಗಿದೆ.
ಕಾರ್ಯಕ್ರಮವನ್ನು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶತಮನೋತ್ಸವ ಸಮಿತಿ ಸಂಚಾಲಕ ಸತೀಶ್ ಕುಂದರ್ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕೆ.ರಘುಪತಿ ಭಟ್,ದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್,ವಿನಯ್ ಕುಮಾರ್ ಸೊರಕೆ,ದ.ಕ ಮತ್ತು ಉಡುಪಿ ಜಿಲ್ಲಾ ಮೀನಿ ಮಾರಾಟ ಫೇಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ,ಮೊದಲಾದ ಗಣ್ಯರು ಉಪಸ್ಥಿತರಿರುವರು.
ಅಪರಾಹ್ನ 3 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು,ಸಾಧಕರಿಗೆ ಸನ್ಮಾನ ನಡೆಯಲಿದೆ ಎಮದು ಸಂಘದ ಅಧ್ಯಕ್ಷ ಜನಾರ್ಧನ ಸಾಲಿಯಾನ್,ಉಪಾಧ್ಯಕ್ಷ ಸುಧರ್ಮ ಶ್ರೀಯಾನ್,ಪ್ರಧಾನ ವ್ಯವಸ್ಥಾಪಕ ಜಗದೀಶ ವಿ ತಿಂಗಳಾಯ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…