Featured

ಮದುವೆಗೆ ಉಡುಗೊರೆಯಾಗಿ ಸಿಕಿದ್ದ ಹೋಮ್ ಥಿಯೇಟರ್ ಸಿಸ್ಟಮ್ ಸ್ಫೋಟ : ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ – Vishwanews24

ಮದುವೆಗೆ ಉಡುಗೊರೆಯಾಗಿ ಸಿಕಿದ್ದ ಹೋಮ್ ಥಿಯೇಟರ್ ಸಿಸ್ಟಮ್ ಸ್ಫೋಟ : ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಛತ್ತೀಸ್‌ಗಢ : ಛತ್ತೀಸ್‌ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಮದುವೆಯ ಉಡುಗೊರೆಯಾಗಿ ಪಡೆದಿದ್ದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಸ್ಫೋಟಗೊಂಡ ಪರಿಣಾಮ ನವವಿವಾಹಿತ ಹಾಗೂ ಆತನ ಹಿರಿಯ ಸಹೋದರ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ಸಿಸ್ಟಮ್ ಇರಿಸಲಾಗಿದ್ದ ಕೋಣೆಯ ಗೋಡೆಗಳು ಹಾಗೂ ಮೇಲ್ಛಾವಣಿ ಕುಸಿದು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 1 ರಂದು 22 ವರ್ಷದ ಹೇಮೇಂದ್ರ ಮೆರಾವಿ ವಿವಾಹವಾಗಿದ್ದು, ಸೋಮವಾರ ಹೇಮೇಂದ್ರ ಹಾಗೂ ಇತರ ಕುಟುಂಬ ಸದಸ್ಯರು ತಮ್ಮ ಮನೆಯ ಕೋಣೆಯೊಳಗೆ ಮದುವೆಯ ಉಡುಗೊರೆಗಳನ್ನು ಹೊರ ತೆಗೆದಿದ್ದರು.

ಇನ್ನು ನವವಿವಾಹಿತ ಹೇಮೇಂದ್ರ ತನಗೆ ಗಿಫ್ಟ್ ಬಂದಿದ್ದ ಹೋಮ್ ಥಿಯೇಟರ್ ಸಿಸ್ಟಮ್ ವೈಯರ್ ರನ್ನು ಎಲೆಕ್ಟ್ರಿಕ್ ಬೋರ್ಡ್ ಗೆ ಸಿಕ್ಕಿಸಿ ಆನ್ ಮಾಡಿದಾಗ, ಭಾರೀ ಸ್ಫೋಟ ಸಂಭವಿಸಿದ್ದು ಹೇಮೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅವರ ಸಹೋದರ ರಾಜ್‌ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಚಿಕಿತ್ಸೆ ವೇಳೆ ಮೆರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಕೊಠಡಿಯನ್ನು ಪರಿಶೀಲಿಸಿದಾಗ ಸ್ಫೋಟಕ್ಕೆ ಕಾರಣವಾಗುವ ಯಾವುದೇ ದಹನಕಾರಿ ವಸ್ತು ಪತ್ತೆಯಾಗಿಲ್ಲ ಎಂದು ರೆಂಗಾಖರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ತಿಳಿಸಿದ್ದಾರೆ.

ಮ್ಯೂಸಿಕ್ ಸಿಸ್ಟಂ ಮಾತ್ರ ಕೋಣೆಯಲ್ಲಿ ಸ್ಫೋಟಗೊಂಡಿದ್ದು, ಸ್ಫೋಟಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ಹೇಳಿದರು.

Vishwa News 24

Recent Posts

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

31 minutes ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

1 hour ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

2 hours ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

2 hours ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

2 hours ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

15 hours ago