Featured

ಮದುವೆಗೆ ನಿರಾಕರಿಸಿದ ಯುವತಿಯನ್ನು ಮನಬಂದಂತೆ ಥಳಿಸಿದ ಯುವಕನ ಮನೆ ಬುಲ್ಡೋಜರ್‌ನಿಂದ ಧ್ವಂಸ – Vishwanews24

ಮದುವೆಗೆ ನಿರಾಕರಿಸಿದ ಯುವತಿಯನ್ನು ಮನಬಂದಂತೆ ಥಳಿಸಿದ ಯುವಕನ ಮನೆ ಬುಲ್ಡೋಜರ್‌ನಿಂದ ಸಂಪೂರ್ಣ ನೆಲಸಮ

ಭೋಪಾಲ್: ಮದುವೆಯಾಗು ಎಂದು ಕೇಳಿದ ಯುವತಿಯನ್ನು ಮನಬಂದಂತೆ ಥಳಿಸಿದ ಯುವಕನ  ಮನೆಯನ್ನು ಬುಲ್ಡೋಜರ್‌ನಿಂದ ಧ್ವಂಸಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

19 ವರ್ಷದ ಯುವತಿಯನ್ನು ಆರೋಪಿ ಯುವಕ ಪಂಕಜ್ ತ್ರಿಪಾಠಿ (24) ಅಮಾನುಷವಾಗಿ ಥಳಿಸಿದ್ದ. ಇದರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಶನಿವಾರ ತ್ರಿಪಾಠಿಯನ್ನು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಂಧಿಸಲಾಗಿದೆ. ಇಂದು ಆರೋಪಿಯ ಮನೆಯನ್ನು ಕೆಡವಲು ಜಿಲ್ಲಾಡಳಿತ ಬುಲ್ಡೋಜರ್ ಅನ್ನು ಕಳುಹಿಸಿದೆ. ಪೊಲೀಸರ ಬೆಂಬಲದೊಂದಿಗೆ ಬುಲ್ಡೋಜರ್ ಮನೆಯನ್ನು ಸಂಪೂರ್ಣವಾಗಿ ನೆಲಸಮಗೊಳಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವೀಡಿಯೋದಲ್ಲಿ ತ್ರಿಪಾಠಿ ಯುವತಿಗೆ ಮೊದಲು ಕಪಾಳಮೋಕ್ಷ ಮಾಡಿರುವುದು ಕಂಡುಬಂದಿದೆ. ಬಳಿಕ ಆಕೆಯ ತಲೆಕೂದಲನ್ನು ಹಿಡಿದು ನೆಲಕ್ಕೆ ಬಡಿದಿದ್ದಾನೆ. ನಂತರ ಆಕೆಯ ಮುಖ ಹಾಗೂ ದೇಹದ ಇತರ ಭಾಗಗಳಿಗೆ ಕಾಲಿನಿಂದ ನಿರ್ದಾಕ್ಷಿಣ್ಯವಾಗಿ ಒದ್ದಿದ್ದಾನೆ. ಈ ವೇಳೆ ಯುವತಿ ಪ್ರಜ್ಞಾಹೀನಳಾಗಿದ್ದಾಳೆ.

ಈ ಎಲ್ಲಾ ಕೃತ್ಯವನ್ನು ತ್ರಿಪಾಠಿಯ ಸ್ನೇಹಿತ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾನೆ. ವೀಡಿಯೋವನ್ನು ಅಳಿಸುವಂತೆ ತ್ರಿಪಾಠಿ ಕೇಳಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದಲ್ಲಿ ಬಿದ್ದಿದ್ದ ಯುವತಿಯನ್ನು ಮೇಲೆತ್ತಲು ಪ್ರಯತ್ನಿಸಿದ್ದಾನೆ.

ಯುವತಿ ಬಳಿಕ ಗಂಟೆಗಟ್ಟಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ರೇವಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಯುವತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೌಗಂಜ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ, ಆರೋಪಿ ಪಂಕಜ್ ತ್ರಿಪಾಠಿಯನ್ನು ಬಂಧಿಸಲಾಗಿದೆ. ಬೇಕಂತಲೇ ವಿಡಿಯೋ ಚಿತ್ರೀಕರಿಸಿದ ಆತನ ಸ್ನೇಹಿನನ್ನೂ ಅರೆಸ್ಟ್ ಮಾಡಲಾಗಿದೆ. ಆರೋಪಿ ಪಂಕಜ್ ತ್ರಿಪಾಠಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 ಹಾಗೂ ವಿಡಿಯೋ ಚಿತ್ರೀಕರಿಸಿ ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago