ಭೋಪಾಲ್: ಮದುವೆಯಾಗು ಎಂದು ಕೇಳಿದ ಯುವತಿಯನ್ನು ಮನಬಂದಂತೆ ಥಳಿಸಿದ ಯುವಕನ ಮನೆಯನ್ನು ಬುಲ್ಡೋಜರ್‌ನಿಂದ ಧ್ವಂಸಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
19 ವರ್ಷದ ಯುವತಿಯನ್ನು ಆರೋಪಿ ಯುವಕ ಪಂಕಜ್ ತ್ರಿಪಾಠಿ (24) ಅಮಾನುಷವಾಗಿ ಥಳಿಸಿದ್ದ. ಇದರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಶನಿವಾರ ತ್ರಿಪಾಠಿಯನ್ನು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಂಧಿಸಲಾಗಿದೆ. ಇಂದು ಆರೋಪಿಯ ಮನೆಯನ್ನು ಕೆಡವಲು ಜಿಲ್ಲಾಡಳಿತ ಬುಲ್ಡೋಜರ್ ಅನ್ನು ಕಳುಹಿಸಿದೆ. ಪೊಲೀಸರ ಬೆಂಬಲದೊಂದಿಗೆ ಬುಲ್ಡೋಜರ್ ಮನೆಯನ್ನು ಸಂಪೂರ್ಣವಾಗಿ ನೆಲಸಮಗೊಳಿಸಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವೀಡಿಯೋದಲ್ಲಿ ತ್ರಿಪಾಠಿ ಯುವತಿಗೆ ಮೊದಲು ಕಪಾಳಮೋಕ್ಷ ಮಾಡಿರುವುದು ಕಂಡುಬಂದಿದೆ. ಬಳಿಕ ಆಕೆಯ ತಲೆಕೂದಲನ್ನು ಹಿಡಿದು ನೆಲಕ್ಕೆ ಬಡಿದಿದ್ದಾನೆ. ನಂತರ ಆಕೆಯ ಮುಖ ಹಾಗೂ ದೇಹದ ಇತರ ಭಾಗಗಳಿಗೆ ಕಾಲಿನಿಂದ ನಿರ್ದಾಕ್ಷಿಣ್ಯವಾಗಿ ಒದ್ದಿದ್ದಾನೆ. ಈ ವೇಳೆ ಯುವತಿ ಪ್ರಜ್ಞಾಹೀನಳಾಗಿದ್ದಾಳೆ.
ಈ ಎಲ್ಲಾ ಕೃತ್ಯವನ್ನು ತ್ರಿಪಾಠಿಯ ಸ್ನೇಹಿತ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾನೆ. ವೀಡಿಯೋವನ್ನು ಅಳಿಸುವಂತೆ ತ್ರಿಪಾಠಿ ಕೇಳಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದಲ್ಲಿ ಬಿದ್ದಿದ್ದ ಯುವತಿಯನ್ನು ಮೇಲೆತ್ತಲು ಪ್ರಯತ್ನಿಸಿದ್ದಾನೆ.
ಯುವತಿ ಬಳಿಕ ಗಂಟೆಗಟ್ಟಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ರೇವಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಯುವತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೌಗಂಜ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ, ಆರೋಪಿ ಪಂಕಜ್ ತ್ರಿಪಾಠಿಯನ್ನು ಬಂಧಿಸಲಾಗಿದೆ. ಬೇಕಂತಲೇ ವಿಡಿಯೋ ಚಿತ್ರೀಕರಿಸಿದ ಆತನ ಸ್ನೇಹಿನನ್ನೂ ಅರೆಸ್ಟ್ ಮಾಡಲಾಗಿದೆ. ಆರೋಪಿ ಪಂಕಜ್ ತ್ರಿಪಾಠಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 ಹಾಗೂ ವಿಡಿಯೋ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…