ಶಂಕರನಾರಾಯಣ: ಮದುವೆಗೆ ಹುಡುಗ ಹುಡುಕಿ ಕೊಡುವುದಾಗಿ ನಂಬಿಸಿ ತಂಗಿಯೇ ಅಕ್ಕನಿಂದ 16.59 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಪಡೆದು ವಂಚಿಸಿರುವ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಸರೋಜಾ ಎಂಬವರಿಗೆ ಅವರ ತಂಗಿ ಸವಿತಾ ಇವರು ಮದುವೆ ಆಗಲು ಹುಡುಗನನ್ನು ಹುಡುಕಿ ಕೊಡುವುದಾಗಿ ಹೇಳಿ ಆ ಬಳಿಕ ಆರೋಪಿತರಾದ ಸವಿತಾ, ಕಿರಣ್, ಶ್ರೀನಿವಾಸ ಎಂಬವರು ಸೇರಿ ಹುಡುಗನ ಕಡೆಯವರು ಎಂದು ಪದೇ ಪದೇ ಮೆಸೇಜ್ ಮಾಡಿ ನಂಬಿಸಿ ಅವರಿಂದ ಒಟ್ಟು ರೂ. 13,59,500 ಹಣ ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ ಮದುವೆ ಸಮಯ ಧರಿಸಿ ವಾಪಾಸು ನೀಡುವುದಾಗಿ ಹೇಳಿ ಸುಮಾರು 3,00,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಪಡೆದು. ವಾಪಾಸು ನೀಡದೆ ಬ್ಯಾಂಕ್‌ನಲ್ಲಿ ಅಡವು ಇರಿಸಿರುತ್ತಾರೆ, ಹಣ ಹಾಗೂ ಚಿನ್ನವನ್ನು ವಾಪಾಸು ಕೇಳಿದ್ದಕ್ಕೆ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…