Featured

ಮದುವೆಯಲ್ಲೂ ಕೆಲಸದ ಪ್ರೀತಿ ಮೆರೆದ ವರ – ವಿಶೇಷ ದಿಬ್ಬಣ!

ಮಂಗಳೂರು: ಮದುವೆಯನ್ನು ಅಪರೂಪ ಎನ್ನುವಂತೆ ಮಾಡಿಕೊಳ್ಳುವುದು ಕೆಲವರಿಗೆ ಇಷ್ಟ. ಹಾಗೆಯೇ ನೀರಿನಲ್ಲಿ, ವಿಮಾನದಲ್ಲಿ, ಮತ್ತು ರೋಪ್ ವೇನಲ್ಲಿ ಮದುವೆಯಾಗೋದನ್ನು ಕೇಳಿದ್ದೇವೆ. ಅದೇ ರೀತಿ ಮದುವೆ ನಂತರ ಕಾರಿನಲ್ಲಿ, ಕುದುರೆ ಮೇಲೆ ದಿಬ್ಬಣ ಹೋಗುತ್ತಾರೆ. ಆದರೆ ಇಲ್ಲೊಬ್ಬ ವರ ಜೆಸಿಬಿಯಲ್ಲೇ ದಿಬ್ಬಣ ಹೊರಟಿದ್ದಾರೆ.

ಜೆಸಿಬಿ ಆಪರೇಟರ್ ತನ್ನ ಮದುವೆಯ ದಿಬ್ಬಣವನ್ನು ಜೆಸಿಬಿಯಲ್ಲಿ ಮೆರವಣಿಗೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರ್ ಎಂಬಲ್ಲಿ ಈ ಪ್ರಸಂಗ ನಡೆದಿದ್ದು, ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ಕಿಮೀ ಉದ್ದಕ್ಕೂ ಜೆಸಿಬಿ ಮುಂದೆ ಕುಳಿತುಕೊಂಡು ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.

ಚೇತನ್ ಮತ್ತು ಮಮತಾ ದಂಪತಿಯ ಮದುವೆ ಸೋಮವಾರ ನಡೆದಿದ್ದು, ಮದುವೆ ಬಳಿಕ ಮೆರವಣಿಗೆ ಜೆಸಿಬಿ ಮತ್ತು ವಾಲಗದ ಜೊತೆಗೆ ನಡೆದಿದೆ. ಚೇತನ್ ಹಲವು ವರ್ಷಗಳಿಂದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದು, ಸ್ಥಳೀಯವಾಗಿ ಹೆಸರು ಮಾಡಿದ್ದರು. ಆದ್ದರಿಂದ ತಮ್ಮ ಮದುವೆಯಲ್ಲೂ ಕೆಲಸದ ಪ್ರೀತಿ ಮೆರೆದಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

44 minutes ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 hour ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 hours ago