Featured

ಮದುವೆಯಾಗುವುದಾಗಿ ನಂಬಿಸಿ ನಟಿ ಮೇಲೆ ಅತ್ಯಾಚಾರ ; ಸ್ಯಾಂಡಲ್‌‌ವುಡ್ ನಟ, ನಿರ್ಮಾಪಕ ಅರೆಸ್ಟ್  – Vishwanews24

ಮದುವೆಯಾಗುವುದಾಗಿ ನಂಬಿಸಿ ನಟಿ ಮೇಲೆ ಅತ್ಯಾಚಾರ ; ಸ್ಯಾಂಡಲ್‌‌ವುಡ್ ನಟ, ನಿರ್ಮಾಪಕ ಅರೆಸ್ಟ್  – Vishwanews24

ಬೆಂಗಳೂರು : ಕನ್ನಡ ಸಿನಿಮಾ ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಅರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್‌‌ವುಡ್ ನಿರ್ಮಾಪಕರೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರನ್ನು ವಿಷನ್​ 2023 ಎಂಬ ಸಿನಿಮಾದ ನಟ, ನಿರ್ಮಾಪಕ ಹರ್ಷವರ್ಧನ್​ ಟಿ.ಜಿ. ಎಂದು ಗುರುತಿಸಲಾಗಿದೆ.

ನಿರ್ಮಾಪಕ ಹರ್ಷವರ್ಧನ್​ ಟಿ.ಜಿ ವಿರುದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಿನಿಮಾ ನಟಿ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಂಡಿರುವ ಪೊಲೀಸರು ಹರ್ಷವರ್ಧನ್​ ಅವರನ್ನು ಬಂಧಿಸಿದ್ದಾರೆ.

ಇನ್ನು ಸಿನಿಮಾಗಳಲ್ಲಿ ಸಹನಟಿಯಾಗಿ ನಟಿಸುತ್ತಿದ್ದ ಮಹಿಳೆಗೆ ಹರ್ಷವರ್ಧನ್​ ಮದುವೆಯಾಗುವುದಾಗಿ ನಂಬಿಸಿ ಕಳೆದ 2 ವರ್ಷಗಳಿಂದ ನನ್ನನ್ನು ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

ಹರ್ಷವರ್ಧನ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

7 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

9 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

9 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago