ಬೆಂಗಳೂರು : ಕನ್ನಡ ಸಿನಿಮಾ ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಅರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್ ನಿರ್ಮಾಪಕರೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರನ್ನು ವಿಷನ್ 2023 ಎಂಬ ಸಿನಿಮಾದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ. ಎಂದು ಗುರುತಿಸಲಾಗಿದೆ.
ನಿರ್ಮಾಪಕ ಹರ್ಷವರ್ಧನ್ ಟಿ.ಜಿ ವಿರುದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಿನಿಮಾ ನಟಿ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಂಡಿರುವ ಪೊಲೀಸರು ಹರ್ಷವರ್ಧನ್ ಅವರನ್ನು ಬಂಧಿಸಿದ್ದಾರೆ.
ಇನ್ನು ಸಿನಿಮಾಗಳಲ್ಲಿ ಸಹನಟಿಯಾಗಿ ನಟಿಸುತ್ತಿದ್ದ ಮಹಿಳೆಗೆ ಹರ್ಷವರ್ಧನ್ ಮದುವೆಯಾಗುವುದಾಗಿ ನಂಬಿಸಿ ಕಳೆದ 2 ವರ್ಷಗಳಿಂದ ನನ್ನನ್ನು ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.
ಹರ್ಷವರ್ಧನ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…