ಉಡುಪಿ : ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಬಂಧಿತ ಮಹಿಳೆಯಾಗಿದ್ದು, ಹೊಸಕೋಟೆ ತಾಲೂಕಿನಲ್ಲಿ ಯುವಕರನ್ನು ವಂಚಿಸಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ತಬಸ್ಸುಮ್ ಮೇಲೆ ಹೊಸಕೋಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮಹಿಳೆಯ ಜಾಡು ಹಿಡಿದು ಉಡುಪಿಗೆ ಆಗಮಿಸಿ ವಶಕ್ಕೆ ಪಡೆದಿದ್ದು, ತಬಸ್ಸುಮ್ ಮೇಲೆ ಮದುವೆಯಾಗುವುದಾಗಿ ನಂಬಿಸಿ ಯುವಕರಿಂದ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಈಕೆಯನ್ನು ಪೊಲೀಸರು ಬಂಧಿಸಲಾಗಿದೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…