ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್‍ನೋಟ್ ಬರೆದಿಟ್ಟಿದ್ದಾನೆ. ಡೆತ್‍ನೋಟ್‍ನಲ್ಲಿ ತನ್ನ ಹೆಂಡತಿ ಬೇರೊಬ್ಬನ ಜೊತೆ ಪರಾರಿಯಾಗಿರುವುದನ್ನು ಉಲ್ಲೇಖಿಸಿದ್ದಾನೆ. ಅಲ್ಲದೇ ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಆರೋಪಿಸಿದ್ದಾನೆ.
ಪತ್ನಿ ಹರೀಶ್ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಳು. ಅಲ್ಲದೇ ಪ್ರಾಣ ಬೆದರಿಕೆ ಹಾಕಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ತನ್ನ ಅಂತ್ಯ ಸಂಸ್ಕಾರವನ್ನ ಬಸವ ಧರ್ಮ ಪ್ರಕಾರವಾಗಿ ನೆರವೇರಿಸುವಂತೆ ಡೆತ್‍ನೋಟ್‍ನಲ್ಲಿ ಆತ ಬರೆದಿಟ್ಟಿದ್ದಾನೆ. ಬಳಿಕ ಜಮೀನಿಗೆ ಹೋಗಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೀಶ್ ಸಾವಿನಿಂದ ಮನನೊಂದು, ಮುಂದೆ ನಿಂತು ಮದುವೆ ಮಾಡಿಸಿದ್ದ ಮಹಿಳೆಯ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…