Featured

ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಮತ್ತೊಬ್ಬನ ಜೊತೆ ಪರಾರಿ : ಮನನೊಂದು ಪತಿ ನೇಣಿಗೆ ಶರಣು – vishwanews24

ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಮತ್ತೊಬ್ಬನ ಜೊತೆ ಪರಾರಿ : ಮನನೊಂದು ಪತಿ ನೇಣಿಗೆ ಶರಣು

ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್‍ನೋಟ್ ಬರೆದಿಟ್ಟಿದ್ದಾನೆ. ಡೆತ್‍ನೋಟ್‍ನಲ್ಲಿ ತನ್ನ ಹೆಂಡತಿ ಬೇರೊಬ್ಬನ ಜೊತೆ ಪರಾರಿಯಾಗಿರುವುದನ್ನು ಉಲ್ಲೇಖಿಸಿದ್ದಾನೆ. ಅಲ್ಲದೇ ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಆರೋಪಿಸಿದ್ದಾನೆ.

ಪತ್ನಿ ಹರೀಶ್ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಳು. ಅಲ್ಲದೇ ಪ್ರಾಣ ಬೆದರಿಕೆ ಹಾಕಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ತನ್ನ ಅಂತ್ಯ ಸಂಸ್ಕಾರವನ್ನ ಬಸವ ಧರ್ಮ ಪ್ರಕಾರವಾಗಿ ನೆರವೇರಿಸುವಂತೆ ಡೆತ್‍ನೋಟ್‍ನಲ್ಲಿ ಆತ ಬರೆದಿಟ್ಟಿದ್ದಾನೆ. ಬಳಿಕ ಜಮೀನಿಗೆ ಹೋಗಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೀಶ್ ಸಾವಿನಿಂದ ಮನನೊಂದು, ಮುಂದೆ ನಿಂತು ಮದುವೆ ಮಾಡಿಸಿದ್ದ ಮಹಿಳೆಯ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago