Featured

ಮದುವೆಯಾದ ನಂತರವೂ ಅಕ್ರಮ ಸಂಬಂಧ : ಮಾಜಿ ಪ್ರೇಯಸಿಯನ್ನ 6 ತುಂಡಾಗಿ ಕತ್ತರಿಸಿ ಅರೆಬೆತ್ತಲೆ ಸ್ಥಿತಿಯಲ್ಲಿ ದೇಹವನ್ನು ಬಾವಿಗೆ ಎಸೆದು ವಿಕೃತಿ ಮೆರೆದ ಆರೋಪಿ – Vishwanews24

ಮದುವೆಯಾದ ನಂತರವೂ ಅಕ್ರಮ ಸಂಬಂಧ : ಮಾಜಿ ಪ್ರೇಯಸಿಯನ್ನ 6 ತುಂಡಾಗಿ ಕತ್ತರಿಸಿ ಅರೆಬೆತ್ತಲೆ ಸ್ಥಿತಿಯಲ್ಲಿ ದೇಹವನ್ನು ಬಾವಿಗೆ ಎಸೆದು ವಿಕೃತಿ ಮೆರೆದ ಆರೋಪಿ

ಲಕ್ನೋ: ಮದುವೆಯಾದ ನಂತರವೂ ಅಕ್ರಮ ಸಂಬಂಧ ಹೊಂದಿದ್ದ ತನ್ನ ಮಾಜಿ ಪ್ರೇಯಸಿಯನ್ನ ಕೊಂದು 6 ತುಂಡಾಗಿ ಕತ್ತರಿಸಿ ಅರೆಬೆತ್ತಲೆ ಸ್ಥಿತಿಯಲ್ಲಿ ದೇಹವನ್ನು ಬಾವಿಗೆ ಎಸೆದು ವಿಕೃತಿ ಮೆರೆದಿದ್ದ ಹಂತಕನನ್ನು ಉತ್ತರಪ್ರದೇಶದ ಪೊಲೀಸರು  ಬಂಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ದೆಹಲಿಯಲ್ಲಿ ಶ್ರದ್ಧಾ ಹತ್ಯೆ ಬಳಿಕ ಇಂತಹದ್ದೇ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಉತ್ತರಪ್ರದೇಶದ ಕೊಚ್ಚಿಯಲ್ಲಿ ಮಹಿಳೆಯ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೇ ಸ್ಥಳಕ್ಕೆ ಮಹಜರು ಮಾಡಲು ಕರೆದೊಯ್ಯುತ್ತಿದ್ದ ವೇಳೆ ತಪ್ಪಿಸಿಕೊಳ್ಳಲು ಆರೋಪಿ ಪ್ರಿನ್ಸ್ ಯಾದವ್‌ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿಯಲಾಗಿದೆ. ಇದನ್ನೂ ಓದಿ: ಮೂಡುಬಿದಿರೆ: ಬೈಕ್ ಸ್ಕಿಡ್ ಆಗಿ ಮರಕ್ಕೆ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು – Vishwanews24

ಆರೋಪಿ ದೇಸಿ ಪಿಸ್ತೂಲ್ ಅನ್ನು ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರಿಂದಾಗಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದೇ ತಿಂಗಳ ನವೆಂಬರ್ 15ರಂದು ಸ್ಥಳೀಯರು ಗ್ರಾಮದ ಹೊರಗಿನ ಬಾವಿಯೊಳಗೆ ಶವವನ್ನು ಪತ್ತೆ ಮಾಡಿದ್ದರು. ಆರಾಧನಾ ಎಂದು ಗುರುತಿಸಲಾದ ಮಹಿಳೆಯ ದೇಹವು ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಎಸ್ಪಿ ಅನುರಾಗ್ ಆರ್ಯ ತಿಳಿಸಿದ್ದರು.

ಪ್ರಿನ್ಸ್ ಯಾದವ್ ಇಶಾಕ್ ಪುರ್ ಗ್ರಾಮದಲ್ಲಿ ವಾಸಿಸುತ್ತಿದ್ದ ತನ್ನ ಗೆಳತಿ ಆರಾಧನಾ ಬೇರೊಬ್ಬನೊಂದಿಗೆ ಮದುವೆಯಾಗಿದ್ದರಿಂದಾಗಿ ಆಕೆಯನ್ನು ಕೊಲ್ಲಲು ಯೋಜನೆ ರೂಪಿಸಿದ್ದನು. ಅದಕ್ಕಾಗಿ ಸೋದರ ಸಂಬಂಧಿ ಸರ್ವೇಶ್ ಮತ್ತು ಕುಟುಂಬದ ಇತರರ ಸಹಾಯ ಪಡೆದಿದ್ದನು. ಆದ ನಂತರವೂ ಈತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ತಿಂಗಳ ನವೆಂಬರ್ 9 ರಂದು ಯಾದವ್ ಆರಾಧನಾಳನ್ನು ತನ್ನ ಬೈಕ್‌ನಲ್ಲಿ ದೇವಸ್ಥಾನಕ್ಕೆ ಕರೆದೊಯ್ದಿದ್ದ ಅಲ್ಲಿಗೆ ತಲುಪಿದಾಗ ಸರ್ವೇಶ್ ಸಹಾಯದಿಂದ ಕಬ್ಬಿನ ಗದ್ದೆಯಲ್ಲಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಇಬ್ಬರೂ ಆಕೆಯ ದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಬಾವಿಗೆ ಎಸೆದಿದ್ದಾರೆ. ದೇಹವನ್ನು ಬಾವಿಗೆ ಎಸೆದು, ತಲೆಯನ್ನು ಅಲ್ಲೇ ಸ್ವಲ್ಪ ದೂರದಲ್ಲಿದ್ದ ಕೊಳಕ್ಕೆ ಬಿಸಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣ; ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಹೆತ್ತವರು – Vishwanews24

ಆರೋಪಿಗಳಿಂದ ಹರಿತವಾದ ಆಯುಧಗಳು ಹಾಗೂ ಒಂದು ದೇಶಿ ನಿರ್ಮಿತ ಪಿಸ್ತೂಲ್ ಹಾಗೂ ಕಾಟ್ರಿಜ್ಟ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಿನ್ಸ್ ಯಾದವ್ ನನ್ನು ಬಂಧಿಸಿದ್ದಾರೆ. ಆದರೆ ಸರ್ವೇಶ್, ಪ್ರಮೀಳಾ ಯಾದವ್, ಸುಮನ್, ರಾಜಾರಾಂ, ಕಲಾವತಿ, ಮಂಜು, ಶೀಲಾ ಇನ್ನೂ ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ನಡೆಸಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago