ಇಸ್ಲಾಮಾಬಾದ್: ಲಾಹೋರ್‌ನ ಭೂಗತ ಪಾತಕಿಯನ್ನ ಮದುವೆ ಮೆರವಣಿಗೆ ಸಂದರ್ಭದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಅಮೀರ್ ಬಾಲಾಜ್ ಟಿಪ್ಪು ಮೃತ ಭೂಗತ ಪಾತಕಿ. ಈತನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಿಂದಾಗಿ ಮದುವೆಗೆ ಬಂದಿರುವ ಅತಿಥಿಗಳಲ್ಲಿ ಮೂವರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳ ದಾಳಿಯಿಂದ ಗಾಯಗೊಂಡ ನಾಲ್ವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಮೀರ್ ಅದಾಗಲೇ ಮೃತಪಟ್ಟಿದ್ದಾನೆ.
ಒಟ್ಟಿನಲ್ಲಿ ಘಟನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಈ ದಾಳಿಗೆ ಕಾರಣವೇನು..? ಹಾಗೂ ದಾಳಿಯ ಹಿಂದಿನ ಉದ್ದೇಶವೇನು..?, ಯಾರು ಈ ದಾಳಿಯನ್ನು ಮಾಡಿದ್ದಾರೆ ಎಂಬುದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಯುತ್ತಿದೆ. ಸ್ಥಳೀಯ ವರದಿಗಳ ಪ್ರಕಾರ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ತೊರೆದಿರುವ ಅಮೀರ್ ಬಾಲಾಜ್, ಇತ್ತೀಚೆಗೆ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ಸೇರಿದ್ದನು ಎಂದು ಹೇಳಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…