ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು , ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಇನ್ನು ಮುಂದೆ ಕಠಿಣವಾಗಿ ಸುಪ್ರೀಂ ಆದೇಶವನ್ನ ಪಾಲಿಸಬೇಕು. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ದೀಪಾವಳಿ ಸಮೀಪವೇ ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ. ಪಟಾಕಿ ಮಾರಾಟಕ್ಕೆ ಒಮ್ಮೆ ಪರವಾನಗಿ ಪಡೆದರೆ ಐದು ವರ್ಷದ ತನಕ ನವೀಕರಣಕ್ಕೆ ಇರುತ್ತಿತ್ತು. ಆದರೆ ಈಗ ಪ್ರತಿ ವರ್ಷವೂ ಹೊಸದಾಗಿ ಲೈಸೆನ್ಸ್ ತೆಗೆದುಕೊಳ್ಳಬೇಕು. ಅದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದೆಲ್ಲೆಡೆ, ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಸೂಚಿಸಿದರು.
ಪಟಾಕಿ ಅಗ್ನಿ ದುರಂತ ತಡೆ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದ ಸಿದ್ದರಾಮಯ್ಯ, ರಾಮಸ್ವಾಮಿ ರೆಡ್ಡಿ ಎಂಬಾತ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದಿದ್ದ. ಗೋಡೌನ್ನಲ್ಲಿ ಮಿತಿ ಮೀರಿ ಪಟಾಕಿ ಸಂಗ್ರಹಕ್ಕೆ ಅನುಮತಿ ಪಡೆದಿರಲಿಲ್ಲ. ಹೀಗಾಗಿ ತಹಶೀಲ್ದಾರ್, ಇನ್ಸ್ಪೆಕ್ಟರ್, ಅಗ್ನಿಶಾಮಕ ಅಧಿಕಾರಿಯನ್ನು ಅಮಾನತ್ತಿಗೆ ಆದೇಶಿಸಲಾಗಿದ್ದು, ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…