Featured

ಮದ್ಯಪ್ರಿಯರಿಗೆ ಶಾಕ್; ಎಲ್ಲಾ ರೀತಿಯ ಮದ್ಯದ ಮೇಲಿನ ಶುಲ್ಕ ಹೆಚ್ಚಳ – Vishwanews24

ಮದ್ಯಪ್ರಿಯರಿಗೆ ಶಾಕ್; ಎಲ್ಲಾ ರೀತಿಯ ಮದ್ಯದ ಮೇಲಿನ ಶುಲ್ಕ ಹೆಚ್ಚಳ

ಮದ್ಯದ ದರ ಹೆಚ್ಚಿಸಿದ ರಾಜ್ಯ ಸರ್ಕಾರ..

ಪ್ರತಿ ಮದ್ಯದ ಬಾಟಲಿಯ ಮೇಲೆ 10ರಿಂದ 20 ರೂ. ಏರಿಕೆ..

ಬೆಂಗಳೂರು: ತಾನು ಘೋಷಿಸಿರುವ ಗ್ಯಾರಂಟಿಗಳ ಹಿನ್ನೆಲೆಯಲ್ಲಿ ರಾಜ್ಯದ ಬೊಕ್ಕಸದ ಮೇಲಾಗುವ ಹಣದ ಹೊರೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಅದಕ್ಕಾಗಿ ಸಂಪನ್ಮೂನ ಕ್ರೋಢೀಕರಣಕ್ಕೆ ಸರ್ಕಾರ ಹೆಜ್ಜೆಯಿಟ್ಟಿದೆ. ಆ ಹಿನ್ನೆಲೆಯಲ್ಲಿ ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದೆ.

ಅಂದರೆ, ಬಿಯರ್ ದರಗಳಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಲಿದೆ. ಬಡ್ ವೈಸರ್ ಬಿಯರ್ ನ ದರ 198 ರೂ.ಗಳಿಂದ 220 ರೂ.ಗಳಿಗೆ, ಯು ಬಿ ಬಿಯರ್ ದರ 130 ರೂ.ಗಳಿಂದ 135 ರೂ.ಗಳಿಗೆ, ಕಿಂಗ್ ಫಿಶರ್ ಬಿಯರ್ ದರ 160 ರೂ.ಗಳಿಂದ 170 ರೂ.ಳಿಗೆ ಏರಿಕೆಯಾಗಲಿದೆ.

ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ರಾಜ್ಯದ ಮದ್ಯ ಮಾರಾಟಗಾರರಿಂದ 35 ಸಾವಿರ ಕೋಟಿ ರೂ. ಸಂಗ್ರಹ ಮಾಡುವ ಗುರಿಯನ್ನು ಹೊಂದಿತ್ತು. ಆದರೆ, ಸಂಗ್ರಹವಾಗಿದ್ದು 29 ಸಾವಿರ ಕೋಟಿ ರೂ. ಮಾತ್ರ. ಾಗ, ಬಿಜೆಪಿ ಸರ್ಕಾರ ಯಾವುದೇ ಗ್ಯಾರಂಟಿಗಳನ್ನು ಘೋಷಣೆ ಮಾಡಿರಲಿಲ್ಲ. ಆದರೆ, ಈಗ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಿಸಿರುವುದರಿಂದ ಮದ್ಯದ ಬೆಲೆಯನ್ನು ಅನಿವಾರ್ಯವಾಗಿ ಹೆಚ್ಚಿಸಿ ರಾಜ್ಯದ ಬೊಕ್ಕಸಕ್ಕೆ ಹಣ ತುಂಬಿಸುವ ಕೆಲಸ ಮಾಡಿದೆ.

2023-24ನೇ ವರ್ಷದಲ್ಲಿ ಅಂದಾಜು 35 ಸಾವಿರ ಕೋಟಿ ರೂ.ಮೌಲ್ಯದ ಮದ್ಯ ಮಾರಾಟ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಆ ಮೂಲಕ, 65 ಸಾವಿರ ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಈ ಮೂಲಕ ಐದು ಗ್ಯಾರಂಟಿಗಳ ಜಾರಿಗಾಗಿ ಬೇಕಾಗುವ ಸಂಪನ್ಮೂಲವನ್ನು ಸಂಗ್ರಹಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

1 hour ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 day ago