Featured

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ

ಚೆನ್ನೈ: ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಸಿಎಂ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿಜಯ್ ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಸರ್ಕಾರ ಈ ಆದೇಶ ಹೊರಡಿಸಿದೆ.

ಇದನ್ನೂ ಓದಿ: 

ಗ್ರಾಹಕರ ವಯಸ್ಸನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಅನುಮಾನ ಬಂದಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ಚೀಟಿಗಳನ್ನು ಪರಿಶೀಲಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಬಾರದು ಎಂದು ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ ಅಂಗಡಿಗಳ ಸಿಬ್ಬಂದಿಗೆ ಸೂಚನೆ ನೀಡಿದೆ.

ಇದೇ ವೇಳೆ ಮದ್ಯದಂಗಡಿಗಳ ಕಾರ್ಯಾಚರಣೆ ಸಮಯವನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಸ್ತುತ ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚುವ ಪ್ರಸ್ತಾಪವೂ ಚರ್ಚೆಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

ಈಗಾಗಲೇ ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಬಸ್ ನಿಲ್ದಾಣಗಳ ಸಮೀಪದಲ್ಲಿದ್ದ 717 TASMAC ಮದ್ಯದಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಂಡಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

4 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

4 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

4 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

4 hours ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

4 hours ago