ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ :ಇಂದಿನಿಂದ ಮೂರು ದಿನ ಮದ್ಯ ಮಾರಾಟ ಇಲ್ಲ – Vishwanews24
ಬೆಂಗಳೂರು : ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ಮುಕ್ತಾಯವಾಗಲಿದ್ದು, ಇಂದು ಸಂಜೆಯಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.
ರಾಜ್ಯದಲ್ಲಿ ಏ. 18 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಇಂದಿನಿಂದ ಮೂರು ದಿನಗಳ ಕಾಲ ಬಾರ್ ಬಂದ್ ಮಾಡುವಂತೆ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಅಂದರೆ ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
