Featured

ಮದ್ರಸಾಗಳಲ್ಲಿ ಕನ್ನಡ ಸೇರಿ ಹಲವು ವಿಷಯಗಳ ಬೋಧನೆ ಕಡ್ಡಾಯ: ಕೃಷ್ಣ ಭೈರೇಗೌಡ – vishwanews24

ಮದ್ರಸಾಗಳಲ್ಲಿ ಕನ್ನಡ ಸೇರಿ ಹಲವು ವಿಷಯಗಳ ಬೋಧನೆ ಕಡ್ಡಾಯ: ಕೃಷ್ಣ ಭೈರೇಗೌಡ

ಬೆಳಗಾವಿ: ರಾಜ್ಯ ವ್ಯಾಪಿ ಮದ್ರಸಾ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಹಾಗೂ ಸಮಾಜ ಶಾಸ್ತ್ರ ಬೋಧನೆ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಬುಧವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್ ಪರವಾಗಿ ಅಬ್ದಲ್ ಝಬ್ಬಾರ್ ಕೇಳಿದ ಪ್ರಶ್ನೆಗೆ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಪರವಾಗಿ ಅವರು ಉತ್ತರಿಸಿದರು.

ಮದ್ರಸಾ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳಿಗೆ ಧಾರ್ಮಿಕ ಬೋದನೆ ಮಾತ್ರವಲ್ಲದೆ ಸಾಮಾಜಿಕ ಬದುಕು ಕಟ್ಟಿಕೊಳ್ಳುವ ಇತರೆ ವಿಷಯಗಳ ಕುರಿತು ಬೋಧನೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಸರಕಾರವೂ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಮುಸ್ಲಿಮ್ ಸಮುದಾಯದ ನೋಂದಾಯಿತ ವಕ್ಫ್ ಆಸ್ತಿಗಳಲ್ಲಿ ಹಾಗೂ ವಕ್ಫ್ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮದ್ರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರಾಯೋಗಿಕ ಆಧಾರದ ಮೇಲೆ 2 ವರ್ಷಗಳು ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಹಾಗೂ ಇತರೆ ವಿಷಯಗಳ ಬಗ್ಗೆ ಸತತವಾಗಿ ಬೋಧಿಸಲಾಗುವುದು. ಜತೆಗೆ ಹತ್ತನೇ ತರಗತಿ, ಪಿಯುಸಿ ಮತ್ತು ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ ನೀಡಲು ಸರ್ಕಾರ ತೀರ್ಮಾನ ಕೈಗೊಳ್ಳಲಾಗಿದೆ ಎಂದೂ ಅವರು ಉಲ್ಲೇಖಿಸಿದರು.

100 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭ: ‘ಮದ್ರಸಾಗಳಲ್ಲಿ ಬೇರೆ ಶಿಕ್ಷಣ ಕೊಡದಿದ್ದಲ್ಲಿ ಪ್ರಚಲಿತ ಸಮಾಜದಿಂದ ಅಲ್ಲಿನ ವಿದ್ಯಾರ್ಥಿಗಳು ವಿಮುಖರಾಗಲಿದ್ದಾರೆ. ಹಾಗಾಗಿ ಬೇರೆ ವಿಷಯಗಳ ಪಾಠ ಮದ್ರಸಾಗಳಲ್ಲಿ ದೊರೆಯಬೇಕು ಎನ್ನುವ ಚರ್ಚೆ ಬಹಳ ವರ್ಷಗಳಿಂದ ಇತ್ತು. ನಮ್ಮ ಸರಕಾರ ಬಂದ ನಂತರ ಈ ಬಗ್ಗೆ ಚರ್ಚಿಸಿದ್ದು, ತಕ್ಷಣವೇ ಈ ವರ್ಷದಿಂದಲೇ ಮದ್ರಸಾಗಳಲ್ಲಿ ಬೇರೆ ವಿಷಯಗಳ ಪಠ್ಯ ಬೋಧನೆ ಮಾಡುವ ಯೋಜನೆ ಅನುಷ್ಠಾನ ಮಾಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದೇವೆ. ಅದರಂತೆ 100 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭ ಮಾಡಲಾಗುತ್ತದೆ’

-ಕೃಷ್ಣ ಭೈರೇಗೌಡ, ಕಂದಾಯ ಸಚಿವ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

17 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

17 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

18 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

18 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

18 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

19 hours ago