ನವದೆಹಲಿ: ಮಧ್ಯಪ್ರದೇಶದಲ್ಲಿ ಅತಂತ್ರ ವಿಧಾನಸಭೆಯು ನಿರ್ಮಾಣವಾಗಿರುವ ಕಾರಣದಿಂದ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಗೆ ಬೆಂಬಲ ನೀಡುವುದಾಗಿ ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ನಾಯಕಿ ಮಾಯಾವತಿ ಹೇಳಿದ್ದಾರೆ.
ಕಾಂಗ್ರೆಸ್ ನ ಹಲವು ನೀತಿಗಳಿಗೆ ನನ್ನ ಸಹಮತವಿಲ್ಲ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದು ನಮ್ಮ ಗುರಿ. ಇದರಿಂದಾಗಿ ಮಧ್ಯಪ್ರದೇಶದಲ್ಲಿ ನಾವು ಕಾಂಗ್ರೆಸ್ ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಮಾಯಾವತಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಐದು ರಾಜ್ಯಗಳ ಫಲಿತಾಂಶಗಳು ಬಿಜೆಪಿ ವಿರುದ್ಧದ ಜನಾದೇಶವಾಗಿದೆ. ಅದರಲ್ಲೂ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಜನತೆ ಬಿಜೆಪಿ ಮತ್ತು ಅದರ ಜನವಿರೋಧಿ ನೀತಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಪರ್ಯಾಯ ಆಯ್ಕೆಯಿಲ್ಲದೆ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ ಎಂದು ಬಿಎಸ್ಪಿ ನಾಯಕಿ ನುಡಿದರು.
ರಾಜಸ್ಥಾನದಲ್ಲೂ ನಾವು ಕಾಂಗ್ರೆಸ್ ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದಲೇ ನಾವು ಈ ಚುನಾವಣೆ ಎದುರಿಸಿದ್ದೇವೆ ಎಂದರು.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಹುಮತದಿಂದ ವಂಚಿತವಾಗಿ 114 ಸ್ಥಾನದೊಂದಿಗೆ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಬಿಎಸ್ ಪಿ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ 109 ಸ್ಥಾನ ಪಡೆದಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…