ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು : ಮತ್ತೆ ಅರಳಲಿದೆಯಾ “ಕಮಲ” ? Vishwanews24

ಭೋಪಾಲ್ : ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪತನದ ಕೌಂಟ್ ಡೌನ್ ಶುರುವಾಗಿದೆ. ಸಿಎಂ ಕಮಲನಾಥ್ ವಿರುದ್ಧ ಬಂಡಾಯ ಸಾರಿರುವ ಜ್ಯೋತಿರಾದಿತ್ಯ ಸಿಂಧ್ಯಾ ಬೆಂಬಲಿತ ಕಾಂಗ್ರೆಸ್ ಶಾಸಕರು ರೆಸಾರ್ಟ್ ರಾಜಕೀಯ ಸ್ಟಾರ್ಟ್ ಮಾಡಿದ್ದಾರೆ.

ಇದರಿಂದ ಕಮಲ್ ನಾಥ್ ಅವರ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಹೀಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ , ವಕೀಲ ಹಾಗೂ ರಾಜ್ಯಸಭಾ ಸಂಸದರಾಗಿರುವ ವಿವೇಕ್ ಟಂಕಾ, ವಿರೋಧ ಪಕ್ಷದ ಮಾಜಿ ನಾಯಕ ಅಜಯ್ ಸಿಂಗ್ ಸೇರಿ 10 ಮಂದಿ ಸಚಿವರ ಜೊತೆ ರಾಜ್ಯದಲ್ಲಿ ಹೇಗೆ ಕಾಂಗ್ರೆಸ್ ಸರ್ಕಾರವನ್ನು ಉಳಿಸಿಕೊಳ್ಳುವುದು ಎಂಬುದರ ಬಗ್ಗೆ ಸಿಎಂ ಕಮಲ್ ನಾಥ್ ಸುದೀರ್ಘ ಚರ್ಚೆ ನಡೆಸಿದ್ದಾರೆ. ಶಾಸಕರ ರಾಜೀನಾಮೆ ಆಟ ಮುಂದುವರಿದರೆ ಇದು ಬಿಜೆಪಿಗೆ ವರದಾನವಾಗಲಿದೆ.

ಮಧ್ಯಪ್ರದೇಶದಲ್ಲಿ ರಾಜಕೀಯ ಅಸ್ಥಿರತೆ ಕಾಡಿದ್ದು, ಆಡಳಿತ ಪಕ್ಷದೊಳಗಿನ ಭಿನ್ನಮತ ತಾರಕಕ್ಕೇರಿದ ಪರಿಣಾಮ ಮುಖ್ಯಮಂತ್ರಿ ಕಮಲನಾಥ್ ಅವರು ಸಚಿವ ಸಂಪುಟದ ಎಲ್ಲ 20 ಸಹೋದ್ಯೋಗಿಗಳ ರಾಜೀನಾಮೆಯನ್ನು ಸೋಮವಾರ ತಡರಾತ್ರಿ ಪಡೆದಿದ್ದಾರೆ. ಇಷ್ಟಾಗ್ಯೂ ಪರಿಸ್ಥಿತಿ ಕೈ ಮೀರುತ್ತಿರುವ ಕಾರಣ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವುದಕ್ಕೆ ದೌಡಾಯಿಸಿದ್ದಾರೆ.

ಸೋಮವಾರ ತಡರಾತ್ರಿ ಸಚಿವ ಸಂಪುಟ ಸಭೆ ನಡೆಸಿದ್ದ ಕಮಲನಾಥ್, 11.30ರ ಹೊತ್ತಿಗೆ ಎಲ್ಲ 20 ಸಚಿವರ ರಾಜೀನಾಮೆ ಪಡೆದುಕೊಂಡಿದ್ದರು. ರಾತ್ರಿ 11.40ರ ಹೊತ್ತಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಜ್ಜನ್ ಸಿಂಗ್ ವರ್ಮಾ, ಜನರಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರತಿಪಕ್ಷದ ಎಲ್ಲ ಪ್ರಯತ್ನಗಳನ್ನೂ ವಿಫಲಗೊಳಿಸಲಾಗುವುದು ಎಂದು ಹೇಳಿದ್ದರು.

 

 

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

3 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

3 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

4 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

6 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

6 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

7 hours ago