ಹೊಸದಿಲ್ಲಿ : ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಸ್ಪರ್ಧಿ ಕಾಂಗ್ರೆಸ್ ಅನ್ನು ಸೋಲಿಸಿ ಮೇಲುಗೈ ಸಾಧಿಸಿತ್ತು.
ಇದೀಗಾ ಚುನಾವಣೆ ಮುಗಿದು ಒಂದು ವಾರದ ಬಳಿಕ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಭಾರತೀಯ ಜನತಾ ಪಕ್ಷ ಆಯ್ಕೆ ಮಾಡಿದೆ.
ಭೋಪಾಲ್‌ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ 58 ವರ್ಷದ ಮೋಹನ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದ್ದು, ಈ ಮೂಲಕ ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯ ಕುರಿತು ನಡೆಯುತ್ತಿರುವ ಸಸ್ಪೆನ್ಸ್ ಕೊನೆಗೂ ಅಂತ್ಯಗೊಂಡಿದೆ.
ಮೋಹನ್ ಯಾದವ್ ಅವರು ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಆದರೆ ಇದೀಗ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದ 10 ದಿನಗಳ ನಂತರ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…