ಭೂಪಾಲ್: ಮಧ್ಯಪ್ರದೇಶ ಸರ್ಕಾರದ 2020ರ ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಇಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇದು ದೇಶದಲ್ಲೇ ಬಲವಂತದ ಧಾರ್ಮಿಕ ಮತಾಂತರ ವಿರುದ್ಧ ಅತ್ಯಂತ ಪ್ರಬಲ ಕಾನೂನಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, ಒಂದು ವೇಳೆ ಕಾಯ್ದೆ ಜಾರಿಯಾದರೇ ವಿವಾಹದ ಮೂಲಕ ಅಥವಾ ಇನ್ನಾವುದೇ ಮೋಸದ ಮೂಲಕ ಮತಾಂತರಗೊಂಡಿದ್ದಕ್ಕಾಗಿ 1 ಲಕ್ಷ ರೂ.ಗಳ ದಂಡ ಮತ್ತು 10 ವರ್ಷ ಜೈಲು ಶಿಕ್ಷೆ ವಿಧಿಸುತ್ತದೆ. ಸಚಿವ ಸಂಪುಟ ಅನುಮೋದನೆ ದೊರೆತಿದ್ದು, ವಿಧಾನಸಭೆಯಲ್ಲಿ ಕಾಯಿದೆ ಮಂಡಿಸಲಾಗುವುದು. ಈ ಮಸೂದೆಯು 1968ರ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯನ್ನು ಬದಲಾಯಿಸುತ್ತದೆ ಎಂದು ತಿಳಿಸಿದರು.
ವ್ಯಕ್ತಿಯನ್ನು ಮತಾಂತರಗೊಳಿಸುವ ಉದ್ದೇಶದಿಂದ ನಡೆದ ಯಾವುದೇ ವಿವಾಹವನ್ನು ಈ ಉದ್ದೇಶಿತ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ಅನೂರ್ಜಿತವೆಂದು ಪರಿಗಣಿಸಲಾಗುತ್ತದೆ. ಮತಾಂತರಗೊಳ್ಳಲು ಇಚ್ಚಿಸುವವರು ಎರಡು ತಿಂಗಳ ಮೊದಲು ಜಿಲ್ಲಾಡಳಿತದ ಮುಂದೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿದೆ ಎಂದು ಮಿಶ್ರಾ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…