ಮಧ್ಯಪ್ರದೇಶ ರಾಜಕೀಯ : ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ -Vishwanews24
ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷದಲ್ಲಿನ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆ ಸಿಂಧ್ಯಾ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ. ಶೀಘ್ರವೇ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
— Jyotiraditya M. Scindia (@JM_Scindia) March 10, 2020
ಅತ್ತ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲನಾಥ್ ರಾಜ್ಯ ಸರ್ಕಾರದ ಅಸ್ಥಿರತೆ ಹೆಚ್ಚಾಗುತ್ತಿದ್ದಂತೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲು ತೆರಳಿದ್ದಾರೆ. ನಿನ್ನೆ ರಾತ್ರಿ ಕಮಲನಾಥ್ ಸರ್ಕಾರದ ಸಚಿವ ಸಂಪುಟದ ಒಟ್ಟು 20 ಸಹೋದ್ಯೋಗಿಗಳು ರಾಜೀನಾಮೆ ಸಲ್ಲಿಸಿದ್ದಾರೆ.
