Featured

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ – vishwanews24

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಕೆಲವು ಸೂಚನೆಗಳನ್ನು ನೀಡಿದೆ.

ವೈಮಾನಿಕ ನಿರ್ಬಂಧ ಮತ್ತು ಕೊಲ್ಲಿ ಪ್ರದೇಶದ ಪ್ರಚಲಿತ ಸ್ಥಿತಿಗತಿಯಂದ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿಕೊಳ್ಳುವಂತಾಗಿದೆ.

ಇದನ್ನೂ ಓದಿ 👇:

ಜಿಲ್ಲಾಡಳಿತದ ಕ್ರಮಗಳು: ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದ್ದು, ಮಾಹಿತಿಗಳನ್ನು ಹಂಚಿಕೊಳ್ಳಲಿದೆ.

ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ:0820-2574802 (1077-ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ದೂ.ಸಂಖ್ಯೆ: 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದಾಗಿದೆ.

ಇದನ್ನೂ ಓದಿ 👇:

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿ ರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ ಸಾರಥಿ ಸಹಾಯತಾ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.

ವೀಸಾಗೆ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನೆಹರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ : ಸಿದ್ದರಾಮಯ್ಯ – vishwanews24

ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…

1 day ago

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  – vishwanews24

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…

1 day ago

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…

1 day ago

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

1 day ago

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ – vishwanews24

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…

1 day ago

ಕಡಬ : ಪಿಕಪ್ – ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…

1 day ago