Featured

ಮಧ್ಯಾಹ್ನದ ಬಿಸಿಯೂಟದೊಂದಿಗೆ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ವಿತರಿಸಲು ಸರಕಾರ ನಿರ್ಧಾರ – Vishwanews24

ಮಧ್ಯಾಹ್ನದ ಬಿಸಿಯೂಟದೊಂದಿಗೆ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ವಿತರಿಸಲು ಸರಕಾರ ನಿರ್ಧಾರ

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕ ವಿತರಿಸಲು ಸರಕಾರ ನಿರ್ಧರಿಸಿದೆ.

ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ’ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆಯಡಿ 1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನಗಳ ಕಾಲ ವಿತರಿಸಲಾಗುತ್ತದೆ.

ರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು 46 ದಿನಗಳ ಕಾಲ ಅನುಷ್ಠಾನಗೊಳಿಸಲಾಗಿತ್ತು.

ಈ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ 1-8ನೇ ತರಗತಿಯ ವಿದ್ಯಾರ್ಥಿಗಳಿಗೆ 100 ದಿನಗಳ ಕಾಲ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಸರ್ಕಾರ 46 ದಿನಗಳಿಗೆ ಅನುಮೋದನೆ ನೀಡಿದೆ.

ಈ ನಡುವೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟನೆ ನೀಡಿದ್ದು, ಯಾವುದೇ ವಿದ್ಯಾರ್ಥಿ ಬಲವಂತವಾಗಿ ಮೊಟ್ಟೆ ಸೇವಿಸುವಂತೆ ಒತ್ತಾಯಿಸುವುದಿಲ್ಲ, ಸಸ್ಯಾಹಾರಿಗಳು ಚಿಕ್ಕಿ ಮತ್ತು ಬಾಳೆಹಣ್ಣು ಆಯ್ಕೆ ಮಾಡಿಕೊಳ್ಳಬಹುದು ಎಂದು ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago