ಬೆಂಗಳೂರು: ಸಂತ್ರಸ್ತೆ ಯುವತಿಗೆ ಜೀವ ಭಯ ಹಾಗೂ ಜೀವ ಬೆದರಿಕೆ ಇರುವ ಕಾರಣ, ಯುವತಿ ನನ್ನ ಮೂಲಕ ದೂರು ನೀಡುತ್ತಾಳೆಂದು ತಿಳಿಸಿದ್ದು, ಸಂತ್ರಸ್ತೆ ಯುವತಿಯೇ ಸ್ವತಃ ಬರೆದುಕೊಟ್ಟಿರುವ ದೂರನ್ನು ನಾನು ಮಧ್ಯಾಹ್ನ 2.30ಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಲ್ಲಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ಪರ ವಕೀಲ ಜಗದೀಶ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಸಿಡಿಯಲ್ಲಿರುವ ಯುವತಿಯ ಕಾನೂನಿನ ಸಹಾಯಕ್ಕೆ ನಾವು ಸಿದ್ದ ಎಂದು ಬಹಿರಂಗ ಹೇಳಿಕೆ ನೀಡಿದ್ದೇವು. ನನ್ನನ್ನೂ ಸೇರಿ ಎಂಟು ನ್ಯಾಯವಾದಿಗಳು ಆಕೆ ಸಹಾಯ ಮಾಡುತ್ತಿದ್ದೇವೆ. ಸಿಡಿಯಲ್ಲಿರುವ ಯುವತಿ ಸಾಮಾನ್ಯ ಮಹಿಳೆಯಾಗಿದ್ದಾರೆ..ಆಕೆ ಕೂಡ ನನಗೆ ರಕ್ಷಣೆ ಬೇಕೆಂದು ಬಹಿರಂಗವಾಗಿಯೇ ಒಂದು ವೀಡಿಯೋ ಬಿಡುಗಡೆ ಮಾಡಿದ್ದಳು ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ. ಇಂದು ಆಕೆಯೇ ಒಂದು ಲಿಖಿತ ದೂರು ಬರೆದು ಕಳುಹಿಸಿದ್ದಾಳೆ. ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ .ಹೀಗಾಗಿ ಇನ್ನೆರಡು ದಿನಗಳಲ್ಲಿ ಪೊಲೀಸರು, ಎಸ್‍ಐಟಿ ಹಾಗೂ ಯಡಿಯೂರಪ್ಪ ಸರ್ಕಾರ ಆಕೆಗೆ ನ್ಯಾಯ ಕೊಡುತ್ತೆ ಅಂತ ಭಾವಿಸುತ್ತೇವೆ.
ಯುವತಿಗೆ ನಾವು ಸಹಾಯ ಮಾಡುತ್ತಿದ್ದೇವಷ್ಟೇ. ತನಿಖೆಯ ಮೂಲಕ ಸತ್ಯಾಂಶ ಹೊರಗಡೆ ಬರುತ್ತದೆ. ಕಳೆದ ಕೆಲವು ದಿನಗಳಿಂದ ವಿಡಿಯೋ ಹರಿದಾಡುತ್ತಿದೆ. ಹೀಗಾಗಿ ನಾನು ಫೇಸ್‌ಬುಕ್ ಮೂಲಕ ಮನವಿ ಮಾಡಿದ್ದೆ. ಕಾನೂನು ಬೆಂಬಲ ನೀಡುವುದಾಗಿ ಹೇಳಿದ್ದೆ. ನಮ್ಮನ್ನು ನಂಬಿ ಆ ಯುವತಿ ದೂರು ನೀಡಲು ಮುಂದೆ ಬಂದಿದ್ದಾರೆ. ಒಂದೆರಡು ದಿನದಲ್ಲಿ ಆ ಯುವತಿ ಮುಂದೆ ಬರಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…