Featured

ಮಧ್ಯಾಹ್ನ 2.30ಕ್ಕೆ ರಮೇಶ್ ಜಾರಕಿಹೊಳಿ ವಿರುದ್ಧ ಸ್ವತಃ ಯುವತಿ ಬರೆದುಕೊಟ್ಟಿರುವ ದೂರು ದಾಖಲು : ಸಿಡಿ ಲೇಡಿ ಪರ ವಕೀಲ -Vishwanews24

ಮಧ್ಯಾಹ್ನ 2.30ಕ್ಕೆ ರಮೇಶ್ ಜಾರಕಿಹೊಳಿ ವಿರುದ್ಧ ಸ್ವತಃ ಯುವತಿ ಬರೆದುಕೊಟ್ಟಿರುವ ದೂರು ದಾಖಲು : ಸಿಡಿ ಲೇಡಿ ಪರ ವಕೀಲ -Vishwanews24

ಬೆಂಗಳೂರು: ಸಂತ್ರಸ್ತೆ ಯುವತಿಗೆ ಜೀವ ಭಯ ಹಾಗೂ ಜೀವ ಬೆದರಿಕೆ ಇರುವ ಕಾರಣ, ಯುವತಿ ನನ್ನ ಮೂಲಕ ದೂರು ನೀಡುತ್ತಾಳೆಂದು ತಿಳಿಸಿದ್ದು, ಸಂತ್ರಸ್ತೆ ಯುವತಿಯೇ ಸ್ವತಃ ಬರೆದುಕೊಟ್ಟಿರುವ ದೂರನ್ನು ನಾನು ಮಧ್ಯಾಹ್ನ 2.30ಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಲ್ಲಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ಪರ ವಕೀಲ ಜಗದೀಶ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಸಿ.ಡಿ ಪ್ರಕರಣ : ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಎಲ್ಲದಕ್ಕೂ ನಾನು ಸಿದ್ಧ : ರಮೇಶ್ ಜಾರಕಿಹೊಳಿ -Vishwanews24

ಸಿಡಿಯಲ್ಲಿರುವ ಯುವತಿಯ ಕಾನೂನಿನ ಸಹಾಯಕ್ಕೆ ನಾವು ಸಿದ್ದ ಎಂದು ಬಹಿರಂಗ ಹೇಳಿಕೆ ನೀಡಿದ್ದೇವು. ನನ್ನನ್ನೂ ಸೇರಿ ಎಂಟು ನ್ಯಾಯವಾದಿಗಳು ಆಕೆ ಸಹಾಯ ಮಾಡುತ್ತಿದ್ದೇವೆ. ಸಿಡಿಯಲ್ಲಿರುವ ಯುವತಿ ಸಾಮಾನ್ಯ ಮಹಿಳೆಯಾಗಿದ್ದಾರೆ..ಆಕೆ ಕೂಡ ನನಗೆ ರಕ್ಷಣೆ ಬೇಕೆಂದು ಬಹಿರಂಗವಾಗಿಯೇ ಒಂದು ವೀಡಿಯೋ ಬಿಡುಗಡೆ ಮಾಡಿದ್ದಳು ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ. ಇಂದು ಆಕೆಯೇ ಒಂದು ಲಿಖಿತ ದೂರು ಬರೆದು ಕಳುಹಿಸಿದ್ದಾಳೆ. ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ .ಹೀಗಾಗಿ ಇನ್ನೆರಡು ದಿನಗಳಲ್ಲಿ ಪೊಲೀಸರು, ಎಸ್‍ಐಟಿ ಹಾಗೂ ಯಡಿಯೂರಪ್ಪ ಸರ್ಕಾರ ಆಕೆಗೆ ನ್ಯಾಯ ಕೊಡುತ್ತೆ ಅಂತ ಭಾವಿಸುತ್ತೇವೆ.

ಯುವತಿಗೆ ನಾವು ಸಹಾಯ ಮಾಡುತ್ತಿದ್ದೇವಷ್ಟೇ. ತನಿಖೆಯ ಮೂಲಕ ಸತ್ಯಾಂಶ ಹೊರಗಡೆ ಬರುತ್ತದೆ. ಕಳೆದ ಕೆಲವು ದಿನಗಳಿಂದ ವಿಡಿಯೋ ಹರಿದಾಡುತ್ತಿದೆ. ಹೀಗಾಗಿ ನಾನು ಫೇಸ್‌ಬುಕ್ ಮೂಲಕ ಮನವಿ ಮಾಡಿದ್ದೆ. ಕಾನೂನು ಬೆಂಬಲ ನೀಡುವುದಾಗಿ ಹೇಳಿದ್ದೆ. ನಮ್ಮನ್ನು ನಂಬಿ ಆ ಯುವತಿ ದೂರು ನೀಡಲು ಮುಂದೆ ಬಂದಿದ್ದಾರೆ. ಒಂದೆರಡು ದಿನದಲ್ಲಿ ಆ ಯುವತಿ ಮುಂದೆ ಬರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago