ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ – vishwanews24

Featured, ರಾಜ್ಯ ನ್ಯೂಸ್

ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ

ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು  ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ.

ಕನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ ಇನ್ನಿಲ್ಲ – vishwanews24

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.

Leave a Reply