ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಉನ್ನತ ವಿಶೇಷ ಭದ್ರತಾ ದಳ(ಎಸ್‌ಪಿಜಿ)
ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ. ಈ ಬಾರಿ ಮರುಪರೀಶೀಲನೆ ಮಾಡಿದ ಸಂದರ್ಭ ಮನಮೋಹನ್ ಸಿಂಗ್ ಅವರಿಗೆ ಅಗತ್ಯವಿರುವ ಭದ್ರತೆ ಪ್ರಮಾಣದ ಮೌಲ್ಯಮಾಪನವನ್ನು ತಜ್ಞರು ಮಾಡಿದ್ದು ಅದರ ಅನ್ವಯ ಅವರ ಭದ್ರತೆಯನ್ನು ಎಸ್ಪಿಜಿಯಿಂದ Z+ಗೆ ಇಳಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಮನಮೋಹನ್ ಸಿಂಗ್ ರಕ್ಷಣೆಗೆ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಲ್ಪಡುತ್ತಾರೆ.
ದೇಶದ ಪ್ರಮುಖ ಹುದ್ದೆಗಳಲ್ಲಿ ಇರುವ ಆಯ್ದ ಗಣ್ಯ ವ್ಯಕ್ತಿಗಳಿಗೆ ಎಸ್‌ಪಿಜಿ ಭದ್ರತೆ ಒದಗಿಸಲಾಗುತ್ತದೆ. ಈ ಭದ್ರತೆಯನ್ನು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗುತ್ತಿದೆ. ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ.
ಸಿಂಗ್ ಅವರಿಗೆ ಇರುವ ರಕ್ಷಣಾ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಯಾರಿಗೆ, ಎಷ್ಟು ಭದ್ರತೆ ನೀಡಬೇಕು ಅನ್ನೋದನ್ನ ಆಯಾ ಸಂಸ್ಥೆಗಳು ವೃತ್ತಿಪರವಾಗಿ ಚರ್ಚಿಸಿ ಕೈಗೊಂಡಿರುವ ನಿರ್ಧಾರ ಇದಾಗಿದೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…