ಬೆಳಗಾವಿ: “ಮನೆಯಲ್ಲಿ ಫ್ರಿಡ್ಜ್, ಬೈಕ್, ಟಿವಿ ಇದ್ದಲ್ಲಿ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು” ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಐದು ಎಕ್ರೆಗಿಂತ ಅಧಿಕ ಜಮೀನು ಸೇರಿದಂತೆ ಮನೆಯಲ್ಲಿ ಟಿವಿ, ಫ್ರಿಡ್ಜ್ ಹಾಗೂ ಬೈಕ್ ಇದ್ದವರ ಪಡಿತರ ಚೀಟಿಯನ್ನು ರದ್ದು ಮಾಡಲಾಗುತ್ತದೆ. ಇವುಗಳ ಪೈಕಿ ಯಾವುದಾದರು ಒಂದು ಇದ್ದಲ್ಲಿ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್ ಕಾರ್ಡ್ ಅನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೆ ಸಮಯಾವಕಾಶ ನೀಡಲಾಗುತ್ತದೆ” ಎಂದಿದ್ದಾರೆ.
“ಸರ್ಕಾರ ಎಪ್ರಿಲ್ ತಿಂಗಳ ನಂತರ ಕಾರ್ಡ್ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ಸಂದರ್ಭ ಎಲ್ಲಾ ಸೌಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹೊಂದಿದ್ದಲ್ಲಿ, ಅವರಿಗೆ ದಂಡದೊಂದಿಗೆ ಶಿಕ್ಷೆಯೂ ನೀಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.
“ಅರೆ ಸರ್ಕಾರರಿ ಅಧಿಕಾರಿಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳು 1.20 ಲಕ್ಷ ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದಿರಲು ಸಾಧ್ಯವೇ ಇಲ್ಲ. ಆದರೂ ಕೂಡಾ ಕೆಲವು ಅಧಿಕಾರಿಗಳು ಕಾರ್ಡ್ ಹೊಂದಿರುವ ಬಗ್ಗೆ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಈಗಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ” ಎಂದಿದ್ದಾರೆ
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…