ಬೆಂಗಳೂರು: ಮನೆ ಕಟ್ಟುವವರಿಗೆಗೊಂದು ಸಿಹಿಸುದ್ದಿ, ಇನ್ಮುಂದೆ ಕಟ್ಟಲಿರುವ ಮನೆಯ ನಕ್ಷೆ ಮಂಜೂರಾತಿ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಾಡುವ ಅಗತ್ಯವಿಲ್ಲ. ಬೈಲಾ ಪ್ರಕಾರ ನಕ್ಷೆ ಸಿದ್ಧಪಡಿಸಿ ಬಿಬಿಎಂಪಿಗೆ ಕಚೇರಿಗೆ ಸಲ್ಲಿಸಿದರೆ ಸಾಕು.
ಈ ಹೊಸ ವ್ಯವಸ್ಥೆ ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. 2400 ಚ.ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನದಲ್ಲಿ ಕಟ್ಟಡ ನಿರ್ಮಿಸುವವರು ನೋಂದಾಯಿತ ವಾಸ್ತುಶಿಲ್ಪಿಯಿಂದ ನಕ್ಷೆಯನ್ನು ಸಿದ್ಧಪಡಿಸಿ, ಮಾಹಿತಿಗಾಗಿ ಪಾಲಿಕೆಗೆ ಸಲ್ಲಿಸಿದರೆ ಸಾಕು. ಕಟ್ಟಡ ನಕ್ಷೆ ಮಂಜೂರಾತಿ ಪಡೆಯುವ ಅಗತ್ಯವಿಲ್ಲ. ನಕ್ಷೆಯಂತೆ ಕಟ್ಟಡ ನಿರ್ಮಿಸಿದ್ದಾರೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.
ಆನ್ ಲೈನ್ ಮೂಲಕವೇ ಕಟ್ಟಡ ನಕ್ಷೆಗೆ ಮಂಜೂರಾತಿ ನೀಡಲು ಕ್ರಮವಹಿಸಲಾಗಿದೆ.
ಕಟ್ಟಡ ಬೈಲಾ ಪ್ರಕಾರ ನಕ್ಷೆಯನ್ನು ಸಿದ್ಧಪಡಿಸಿ, ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಬೇಕು. ನೋಂದಾಯಿತ ಎಂಜಿನಿಯರ್ ಗಳು ಮತ್ತು ವಾಸ್ತುಶಿಲ್ಪಿಗಳಿಂದ ಸಿದ್ಧಪಡಿಸಿದ ನಕ್ಷೆ, ಖಾತೆ, ತೆರಿಗೆ ಪಾವತಿ ರಶೀದಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪರಿಶೀಲಿಸಿ ಕಟ್ಟಡ ನಕ್ಷೆ ಮಂಜೂರಾತಿ ನೀಡಲಿದೆ. ನಂತರ ಆನ್ ಲೈನ್ ನಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಪ್ರಮಾಣಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಆಯುಕ್ತ ಎಸ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…