ಬೆಂಗಳೂರು: ಕೆಲಸಗಾರರಿಗೆ ಸಂಬಳ ನೀಡಲು ಮನೆಯಲ್ಲಿ ಇಟ್ಟಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ನೇಪಾಳಕ್ಕೆ ಎಸ್ಕೇಪ್ ಆಗಲು ಯತ್ನಿಸಿದ್ದ ನೇಪಾಳಿ ಮೂಲದ ದಂಪತಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 25 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.
ನೇಪಾಳ ಮೂಲದ ಪವನ್ ಬಿಸ್ತಾ ಹಾಗೂ ಸೀತಾ ಬಿಸ್ತಾ ಬಂಧಿತ ಆರೋಪಿಗಳು. ಅಮೃತಹಳ್ಳಿಯ ಕಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಮನೆ ಕೆಲಸಕ್ಕೆ ಸೇರಿದ್ದ ದಂಪತಿ, ಕೇವಲ ಒಂದು ತಿಂಗಳಲ್ಲೇ ಮನೆಯ ಮಾಲೀಕರು ಹಣ ಎಲ್ಲಿ ಇಡುತ್ತಾರೆ ಎಂಬ ಮಾಹಿತಿ ಕಲೆ ಹಾಕಿದ್ದರು. ಕಳ್ಳತನ ಮಾಡುವ ಉದ್ದೇಶದಿಂದಲೇ ಕಡಿಮೆ ಸಂಬಳಕ್ಕೆ ಕೆಲಸಕ್ಕೆ ಸೇರಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಇದನ್ನೂ ಓದಿ:
ಉದ್ಯಮಿ ತಮ್ಮ ಕೆಲಸಗಾರರಿಗೆ ಸಂಬಳ ನೀಡಲು ಬ್ಯಾಂಕ್‌ನಿಂದ 25 ಲಕ್ಷ ರೂಪಾಯಿ ಡ್ರಾ ಮಾಡಿ ಮನೆಯ ಕಬೋರ್ಡ್‌ನಲ್ಲಿ ಇಟ್ಟಿದ್ದರು. ಕಬೋರ್ಡ್‌ನ ಕೀಲಿಯನ್ನು ಮತ್ತೊಂದು ಕಬೋರ್ಡ್‌ನಲ್ಲಿ ಇಟ್ಟಿರುವ ವಿಚಾರವೂ ಆರೋಪಿಗಳಿಗೆ ಗೊತ್ತಾಗಿತ್ತು. ಮನೆಯ ಮಾಲೀಕರು ಇಲ್ಲದ ಸಮಯದಲ್ಲಿ ಕಬೋರ್ಡ್ ತೆರೆದು 25 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಸಮೇತ ದಂಪತಿ ಪರಾರಿಯಾಗಿದ್ದರು.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಮೃತಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದರು. ಆರೋಪಿಗಳು ಬೆಂಗಳೂರು ತೊರೆಯುವ ಮುನ್ನವೇ ಕಾರ್ಯಾಚರಣೆ ನಡೆಸಿದ ಪೊಲೀಸರು, ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಿದ್ದ 25 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…