ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ಲು ವಸೂಲಿಗ ಸಿಬ್ಬಂದಿ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ.
ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು ದುರುಪಯೋಗಪಡಿಸಿಕೊಂಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಈ ಕುರಿತು ಶಿವಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಅವರು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಹಣದ ದುರುಪಯೋಗದ ವಿಚಾರ ಬೆಳಕಿಗೆ ಬಂದ ಬಳಿಕ ಪಂಚಾಯಿತಿ ವತಿಯಿಂದ ಮಂಜುನಾಥ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ವೇಳೆ ಅವರು ಸುಮಾರು ₹3 ಲಕ್ಷವನ್ನು ಪಂಚಾಯಿತಿಗೆ ಮರುಪಾವತಿಸಿದ್ದು, ಉಳಿದ ಹಣವನ್ನು ಪಾವತಿಸದೆ ವಂಚಿಸಿರುವುದಾಗಿ ಪಿಡಿಒ ದೂರಿನಲ್ಲಿ ತಿಳಿಸಿದ್ದಾರೆ.
ಪಂಚಾಯಿತಿ ಹಣವನ್ನು ದುರುಪಯೋಗಪಡಿಸಿಕೊಂಡು ನಂಬಿಕೆ ದ್ರೋಹ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಜುನಾಥ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…