ಬೆಂಗಳೂರು: ಯಾವುದೇ ಕಾರಣಕ್ಕೆ ಮನೆ ಬದಲಿಸುವವರಿಗೆ ಗೃಹಜ್ಯೋತಿ ಅವಕಾಶವನ್ನ ಇಂಧನ ಇಲಾಖೆ ಕಲ್ಪಿಸಿದೆ. ಬಾಡಿಗೆಗೆ ಇದ್ದ ಹಳೆ ಮನೆಯ ಆರ್‌ಆರ್ ಸಂಖ್ಯೆ ಡಿ-ಲಿಂಕ್ ಮಾಡಿ ಹೊಸ ಮನೆಗೆ ಬಾಡಿಗೆಗೆ ಹೋಗುವ ಮನೆಯ ಸಂಖ್ಯೆಯೊಂದಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಒಂದು ವರ್ಷದ ಹಿನ್ನೆಲೆ ಇಂಧನ ಇಲಾಖೆಯಿಂದ ಪ್ರಕಟಣೆ ಹೊರಡಿಸಿದೆ.
ಮನೆ ಬದಲಾಯಿಸಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹಜ್ಯೋತಿಯ ಲಾಭ ಪಡೆಯಬಹುದಾಗಿದೆ.
ಡಿ-ಲಿಂಕ್ ಮಾಡುವುದು ಹೇಗೆ?
ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.
ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್ ನಂಬರ್ ಜೊತೆ ಲಿಂಕ್ ಆಗಿರುವ ಆರ್.ಆರ್. ನಂಬರ್ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್ ಜತೆ ಲಿಂಕ್ ಆಗಿರದ ಆರ್.ಆರ್. ನಂಬರ್‌ಗೆ ಲಿಂಕ್ ಮಾಡಬಹುದು. ಅಂದರೆ ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬಹುದು.
ಗೃಹಜ್ಯೋತಿ ಯೋಜನೆಯ ವೆಬ್‌ಸೈಟ್ ಸಾಫ್ಟ್‌ವೇರ್ ಅಪ್‌ಡೇಟ್ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು. ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…