Featured

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ – vishwanews24

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್

ಬೆಂಗಳೂರು: ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಶುಕ್ರವಾರ ಚಾಲನೆ ನೀಡಿದರು.

ಯೋಜನೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, “ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಇಡೀ ದೇಶದಲ್ಲಿ ಇದೇ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನು ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ” ಎಂದು ತಿಳಿಸಿದರು.

“ಪೊಲೀಸರು ಜನಸ್ನೇಹಿ ಆಗಬೇಕು ಎಂದು ಈ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದೇವೆ. ನಾವೇ ಜನರ ಮನೆ ಬಾಗಿಲಿಗೆ ಕಷ್ಟ ಕೇಳೋಣ ಅಂತ ತೀರ್ಮಾನ ಮಾಡಿದ್ದೇವೆ. ಪ್ರತಿ ಠಾಣೆಯ ಲಿಮಿಟ್ಸ್ ನಲ್ಲಿ ಈ ಕೆಲಸ ಆಗಬೇಕು. ಬೀಟ್ ಪೊಲೀಸರು ಈ ಕೆಲಸವನ್ನು ಮಾಡಬೇಕು. ಯಾರ ಮನೆಯಲ್ಲಿ ಯಾರಿದ್ದಾರೆ, ಹೊಸದಾಗಿ ಬಂದಿದ್ದಾರ, ಬಾಡಿಗೆಗೆ ಇದ್ದಾರೆಯೇ, ಅವರು ಏನ್ ಕೆಲಸ ಮಾಡ್ತಾರೆ ಎಂಬ ಮಾಹಿತಿ ಕಲೆಹಾಕಿದ್ರೆ ಇಡೀ ಬೆಂಗಳೂರು ಡೇಟಾ ಬ್ಯಾಂಕ್ ನಮ್ಮ ಬಳಿ ಇರುತ್ತದೆ. ಪೊಲೀಸರು ಬಂದಾಗ ಜನರು ಕಷ್ಟಸುಖ ಹೇಳಬಹುದು. ಏನಾದ್ರೂ ತೊಂದರೆ ಆಗ್ತಾ ಇದ್ದರೆ ಹೇಳಬಹುದು. ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದರೆ ಮಾಹಿತಿ ನೀಡಬಹುದು. ಜನಸ್ನೇಹಿ ಪೊಲೀಸರ ಜೊತೆಗೆ ಶಾಂತಿ ಕಾಪಾಡಲು ಈ ಕಾರ್ಯಕ್ರಮ ಸಹಾಯ ಆಗುತ್ತದೆ. ನಿಮ್ಮ ಮನೆಗೆ ಬಂದಾಗ ನಿಮ್ಮ ಹೆಸರನ್ನು ನಮೂದಿಸಿಕೊಳ್ಳುತ್ತಾರೆ. ಬಳಿಕ ಅದನ್ನ ಡಿಜಿಟಲೈಸ್ ಮಾಡಿ ಇಟ್ಟುಕೊಳ್ಳುತ್ತಾರೆ” ಎಂದು ಮಾಹಿತಿ ನೀಡಿದರು.

ಈ ಯೋಜನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬೆಂಗಳೂರು ಆಗ್ನೇಯ ಡಿಸಿಪಿ, “ಮನೆ ಮನೆಗೆ ಪೊಲೀಸ್’ ನಿಮ್ಮ ರಕ್ಷಕರು, ನಿಮ್ಮ ಮನೆ ಬಾಗಿಲಿಗೆ! ನಿಮ್ಮ ಪೊಲೀಸ್ ಇಲಾಖೆ ಸಂಬಂಧಿತ ಸಮಸ್ಯೆಗಳನ್ನು ಆಲಿಸಿ, ದೂರುಗಳನ್ನು ದಾಖಲಿಸಲು ಮತ್ತು ನಿಮ್ಮ ಮೌಲ್ಯಯುತ ಸಲಹೆಗಳನ್ನು ಸ್ವೀಕರಿಸಲು ನಾವು ಸಿದ್ಧರಿದ್ದೇವೆ. ಸಮಾಜದಲ್ಲಿ ನಿರ್ಭಯ ವಾತಾವರಣವನ್ನು ಸೃಷ್ಟಿಸುವ ಜೊತೆಗೆ ರಕ್ಷಣೆ ಮತ್ತು ಸುರಕ್ಷತೆ ಒದಗಿಸುವ ಗುರುತರವಾದ ಜವಾಬ್ದಾರಿಗಳು ಪೊಲೀಸ್ ಇಲಾಖೆಯ ಮೇಲಿವೆ. ಪೊಲೀಸ್ ಸೇವೆಗಳ ಪ್ರತಿಯೊಂದು ಸ್ತರದಲ್ಲೂ ಸಾರ್ವಜನಿಕರ ಬೆಂಬಲ ಮತ್ತು ಸಹಭಾಗಿತ್ವ ಸಾಧಿಸಿಕೊಳ್ಳುವುದರಿಂದ ಮಾತ್ರವೇ ಉತ್ಕೃಷ್ಟ ಸೇವೆಯನ್ನು ಒದಗಿಸಲು ಸಾಧ್ಯ ಆ ನಿಟ್ಟಿನಲ್ಲಿ ಈಗಾಗಲೇ ಪ್ರತಿಯೊಂದು ಪೊಲೀಸ್ ಠಾಣಾ ಸರಹದ್ದುಗಳನ್ನು ಸಬ್-ಬೀಟ್‌ಗಳಿಗೂ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

Vishwa News 24

Recent Posts

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ – vishwanews24

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…

40 minutes ago

ಧರ್ಮಸ್ಥಳ ಬುರುಡೆ ಪ್ರಕರಣ : ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ – vishwanews24

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌…

51 minutes ago

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ – vishwanews24

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…

1 hour ago

ನಟ ದೊಡ್ಡಣ್ಣ ನಿಧನ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ವೈರಲ್ – vishwanews24

ಆರೋಗ್ಯವಾಗಿದ್ದೇನೆ, ಆತಂಕ ಬೇಡ: ದೊಡ್ಡಣ್ಣ ಪ್ರತಿಕ್ರಿಯೆ ಬೆಂಗಳೂರು: ಹಿರಿಯ ಚಿತ್ರನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…

1 hour ago

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಅರ್ಜಿ ಸಲ್ಲಿಸಲು ಸೂಚನೆ – vishwanews24

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.. ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ರಾಜ್ಯದಲ್ಲಿ ಇದೇ…

1 hour ago

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ – vishwanews24

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…

2 hours ago