ಬಳ್ಳಾರಿ: ಮನೆ ಹತ್ತಿರ ನಿಂತಿದ್ದ ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ.
ವಿರಾಟ್.ಜೆ (4) ಮೃತ ಬಾಲಕ. ಬಾಲಕನ ಮನೆ ಹತ್ತಿರದ ಖಾಲಿ ಜಾಗದಲ್ಲಿ ಚರಂಡಿ ನೀರು ನಿಂತಿತ್ತು. ಆಟವಾಡಲು ಹೋದ ಸಂದರ್ಭ ನೀರು ನಿಂತಿರುವುದನ್ನು ಗಮನಿಸದೇ ಬಾಲಕ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸುದ್ದಿ ತಿಳಿದು ಹೊಸಪೇಟೆ ಶಾಸಕ ಹೆಚ್‌ಆರ್ ಗವಿಯಪ್ಪ ಆಸ್ಪತ್ರೆಗೆ ದೌಡಾಯಿಸಿ ಮೃತ ಬಾಲಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪಟ್ಟಣದಲ್ಲಿ ಚರಂಡಿ ನೀರು ನಿಂತಿರೋ ಪ್ರದೇಶಗಳನ್ನು ಕೂಡಲೇ ಸ್ವಚ್ಛಗೊಳಿಸುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…