ರೈತರ ಸಾಲ ಮನ್ನಾದಿಂದ ರಾಜ್ಯದಲ್ಲಿ ಸಂಕಷ್ಟಎದುರಾಗಲಿದೆ ಎಂಬ ಆರ್ಥಿಕ ತಜ್ಞರ ಅಭಿಪ್ರಾಯ ಸರಿಯಿಲ್ಲ. ಯಾವುದೇ ಕಾರಣಕ್ಕೂ ತಪ್ಪು ಲೆಕ್ಕಾಚಾರ ನೀಡುವ ಆರ್ಥಿಕ ತಜ್ಞರ ಸಲಹೆಗಳನ್ನು ಸ್ವೀಕರಿಸಬಾರದು. ಚುನಾವಣಾ ವೇಳೆ ನೀಡಿದ ಭರವಸೆಯಂತೆ ಸಾಲ ಮನ್ನಾ ಮಾಡಬೇಕು. ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಘೋಷಿಸದಿದ್ದರೆ ಯಾವ ರೈತರೂ ಸಾಲ ತೀರಿಸಬೇಡಿ ಎಂದು ರೈತ ಸಂಘ ಕರೆ ನೀಡಿದರು.
ಬೆಂಗಳೂರು : ಬೆಳೆ ಸಾಲವನ್ನು ದೇಶದ ಆಹಾರ ಉತ್ಪಾದನೆಗಾಗಿ ಸರ್ಕಾರದಿಂದ ನೀಡಿರುವ ಧನ ಸಹಾಯ ಎಂದು ಪರಿಗಣಿಸಿ ಸರ್ಕಾರ ರೈತರ ಎಲ್ಲ ಸಾಲವನ್ನು ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಜೆಟ್‌ನಲ್ಲಿ ಸಾಲ ಮನ್ನಾ ಘೋಷಿಸಬೇಕು. ರೈತರ ಸಾಲ ಮನ್ನಾದಿಂದ ರಾಜ್ಯದಲ್ಲಿ ಸಂಕಷ್ಟಎದುರಾಗಲಿದೆ ಎಂಬ ಆರ್ಥಿಕ ತಜ್ಞರ ಅಭಿಪ್ರಾಯ ಸರಿಯಿಲ್ಲ. ಯಾವುದೇ ಕಾರಣಕ್ಕೂ ತಪ್ಪು ಲೆಕ್ಕಾಚಾರ ನೀಡುವ ಆರ್ಥಿಕ ತಜ್ಞರ ಸಲಹೆಗಳನ್ನು ಸ್ವೀಕರಿಸಬಾರದು. ಚುನಾವಣಾ ವೇಳೆ ನೀಡಿದ ಭರವಸೆಯಂತೆ ಸಾಲ ಮನ್ನಾ ಮಾಡಬೇಕು. ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಘೋಷಿಸದಿದ್ದರೆ ಯಾವ ರೈತರೂ ಸಾಲ ತೀರಿಸಬೇಡಿ. ನಮ್ಮಿಂದ ಸಾಲ ಕಟ್ಟಲು ಸಾಧ್ಯವಿಲ್ಲವೆಂದು ಬ್ಯಾಂಕ್‌ಗಳಿಗೆ ತಿಳಿಸಿ ಎಂದು ರೈತರಿಗೆ ಕರೆ ನೀಡಿದರು.
ಸಾಲ ಮನ್ನಾ ವಿಚಾರದಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರದ ನಿಲುವು ದ್ವಂದ್ವಮಯವಾಗಿದೆ. ಕುಮಾರಸ್ವಾಮಿ ಅವರು ರೈತರ ಸಂಕಷ್ಟವನ್ನು ಅರ್ಥಮಾಡಿಕೊಳ್ಳಬೇಕು. ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಕಾಲಹರಣ ಮಾಡಬಾರದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲ ಮನ್ನಾ ವಿಚಾರದಲ್ಲಿ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೇಳಿದರು.
ರೈತರ ಸಂಕಷ್ಟಗಳನ್ನು ಪರಿಹರಿಸಲು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…