ಉಡುಪಿ: ನವದಂಪತಿ ಆ ದಿನ ಮಾಡಿದ ಸಣ್ಣ ಸಾಮಾಜಿಕ ಕಳಕಳಿಗೆ ದೇಶದ ಪ್ರಧಾನಿಯೇ ಮೆಚ್ಚಿ ಶ್ಲಾಘಿಸಿದ್ದಾರೆ. ಮನ್ ಕಿ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ಮಾಡಿರೋ ದಂಪತಿಗಳಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದಂಪತಿಗಳ ಮನೆಗೆ ತೆರಳಿ ಅಭಿನಂಧನೆ ಸಲ್ಲಿಸಿದರು.
ನವೆಂಬರ್ 18ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಬೈಂದೂರು ತಾಲೂಕಿನ ಅನುದೀಪ್ ಹಾಗೂ ಮಿನುಷಾ ದಂಪತಿಗಳು ಹನಿಮೂನ್ ಹೋಗೋದಕ್ಕೂ ಮುನ್ನ ವಿಭಿನ್ನ ಕಾರ್ಯ ಮಾಡಬೇಕು ಅಂತ ನಿರ್ಧರಿಸಿ ಅನುದೀಪ್ ಹಾಗೂ ಮಿನುಷಾ ಬೈಂದೂರಿನ ಸೋಮೇಶ್ವರ ಬೀಚ್ ನಲ್ಲಿ ಏಳು ದಿನಗಳ ಕಾಲ 700ಮೀಟರ್ ಉದ್ದಕ್ಕೂ500ಕೆಜಿ ಕಸ ಸಂಗ್ರಹ ಮಾಡುವ ಮೂಲಕ ಸ್ವಚ್ಚತೆ ಮಾಡಿದ್ದಾರೆ. ದಂಪತಿಗಳ ಈ ಕಾರ್ಯ ವೈರಲ್ ಕೂಡ ಆಗಿತ್ತು. ಇದನ್ನ ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಮನ್ ಕಿ ಬಾತ್‌ನಲ್ಲಿ ದಂಪತಿಗಳ ಕಾರ್ಯವನ್ನ ಶ್ಲಾಘಿಸಿದ್ದಾರೆ.
ಅಭಿನಂದನ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರ್ ಉದಯಕುಮಾರ್ ಶೆಟ್ಟಿ,ಜಿಲ್ಲಾಧ್ಯಕ್ಷ ಸುರೇಶ್ ನಾಯಕ್,ಯಶ್ಪಾಲ್ ಸುವರ್ಣ,ದಿನಕರ ಬಾಬು,ಶಿಲ್ಪಾ ಜಿ ಸುವರ್ಣ ,ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…