ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಫುರ ಗ್ರಾಮದಲ್ಲಿ ನಡೆದಿದೆ. ರಂಗಾಪುರದ ಚಂದ್ರಶೇಖರ್ ಎಂಬವರ ಪುತ್ರ ಪ್ರಜ್ವಲ್(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹೊಳಲ್ಕೆರೆ ವಾಗ್ದೇವಿ ಶಾಲೆ ಯಲ್ಲಿ ಹತ್ತನೇ ತರಗತಿ ವ್ಯಾಸಾಂಗ ಮಾಡುತ್ತಿದ್ದನು.
ಶಾಲೆಯಲ್ಲಿ ನಡೆಸಲಾಗಿದ್ದ ಪರೀಕ್ಷೆಗೆ ಆತ ಹಾಜರಾಗಿರಲಿಲ್ಲ. ಹೀಗಾಗಿ ಶಾಲಾ ಶಿಕ್ಷಕರು ಪೋಷಕರನ್ನು ಕರೆದುಕೊಂಡು ಬರುವಂತೆ ಬಾಲಕನಿಗೆ ಹೇಳಿದ್ದಾರೆ. ಶಾಲೆಯಿಂದ ಮರಳಿ ಮನೆಗೆ ಬಂದವನು ನಾನು ಓದಿಕೊಳ್ಳುತ್ತೇನೆ ಎಂದು ಹೇಳಿ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಲ್ಲಿ ಮಫ್ಲರ್‌ನಿಂದ ನೇಣು ಬಿಗಿದುಕೊಂಡಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…