ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ದೇಶದ ಮುಂದಿನ ಪ್ರಧಾನಿ ಆಗಬೇಕೆನ್ನುವುದು ಜನತೆ ಬಯಸುತ್ತಾರೆ ಎಂದು ಸಂಸದ ಹಾಗೂ ಮಾಜಿ ಸಚಿವ ದಿನೇಶ್ ತ್ರಿವೇದಿ ಹೇಳಿದ್ದಾರೆ.
“ನೀವು ನನ್ನೊಂದಿಗೆ ಜನರನ್ನು ನೋಡಿರಬಹುದು. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಹಾಗಾಗಿ ಜನರಿಗೆ ಬಂದುಕುಗಳೊಂದಿಗೆ ಇರಬೇಕೋ ಅಥವಾ ಅಭಿವೃದ್ಧಿಯನ್ನು ಬೆಂಬಲಿಸಬೇಕೋ ಎಂಬುದು ತಿಳಿದಿದೆ. ಪ್ರಧಾನಿ ಇಲ್ಲಿಗೆ ಬಂದಷ್ಟೂ ನಮಗೆ(ಮಮತಾ ಬ್ಯಾನರ್ಜಿಗೆ) ಹೆಚ್ಚಿನ ಮತ ದೊರೆಯುತ್ತದೆ” ಎಂದು ದಿನೇಶ್ ತಿಳಿಸಿದ್ದಾರೆ.
ಮುಂದುವರೆದು ಮಾತನಾಡುತ್ತಾ, ಜನತೆಗೆ ಕೇವಲ ಭರವಸೆಗಳನ್ನು ನಿಡುವ ರಾಜಕಾರಣಿಗಳನ್ನು ನೋಡಿ ಬೇಸರವಾಗಿದೆ.ಹಾಗಾಗಿ ರಾಜ್ಯದಲ್ಲಿ ಅಭಿವೃದ್ಧಿಯನ್ನು ತಂದಿರುವ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ. ರಾಜ್ಯದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲೂ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದಿದ್ದಾರೆ.
“ಪಶ್ಚಿಮ ಬಂಗಾಳದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಆ ಬದಲಾವಣೆಯನ್ನು ದೀದಿ(ಮಮತಾ) ನೀಡಿದ್ದಾರೆ. ಈಗ ಭಾರತ ಬದಲಾವಣೆ ಬಯಸುತ್ತಿದೆ. ಅದನ್ನೂ ಸಹ ದೀದಿ(ಮಮತಾ) ತರಲಿದ್ದಾರೆ” ಎಂದು ದಿನೇಶ್ ತ್ರಿವೇದಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…