ಹೌರ : ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಪಶ್ಚಿಮ ಬಂಗಾಳ ಮತ್ತೊಂದು ಕಾಶ್ಮೀರವಾಗಲಿದೆ ಎಂದು ಬಾರಕ್ಪುರ್ ಕ್ಷೇತ್ರದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟೀಕಿಸಿದ್ದಾರೆ.
ದೀದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಿಂಗ್, ಮಮತಾ ಬ್ಯಾನರ್ಜಿ ಅವರಿಗೆ ಅಧಿಕಾರದ ಆಸೆ ಹೆಚ್ಚಾಗಿದ್ದು, ಅಧಿಕಾರಕ್ಕಾಗಿ ಏನನ್ನಾದರೂ ಮಾಡಲು ಸಿದ್ಧರಿದ್ದಾರೆ. ಹೀಗಾಗಿ ಈಗ ಪಶ್ಚಿಮ ಬಂಗಾಳವನ್ನು ಕಾಶ್ಮೀರವಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಮತಾ ಬ್ಯಾನರ್ಜಿಯ ಸಹಚರರು ಹಾಗೂ ತೃಣಮೂಲ ಕಾಂಗ್ರೆಸ್ನ ನಾಯಕರು ಹೊರಗಿನ ಗೂಂಡಾಗಳಿಗೆ ಆಶ್ರಯ ನೀಡುತ್ತಿದ್ದಾರೆ. ಇದನ್ನೆಲ್ಲ ತಿಳಿದಿದ್ದರೂ ಪೊಲೀಸರು ದೀದಿಯ ಸೇನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ನ 107 ಶಾಸಕರು ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಆದರೆ ಮಮತಾ ಬ್ಯಾನರ್ಜಿ ಭತ್ಪರದಲ್ಲಿ ಚುನಾವಣೆಗೆ ನಿಂತು ಗೆದ್ದು ತೋರಿಸಲಿ, ಅವರ ಬೆದರಿಕೆಗೆ ಅಲ್ಲಿನ ಜನ ಬಗ್ಗುವುದಿಲ್ಲ. ಅವರಿಗೆ ಬೇಕಿರುವುದು ಬಿಜೆಪಿ ಮತ್ತು ಅರ್ಜುನ್ ಸಿಂಗ್ ಎಂದು ಸವಾಲೆಸೆದರಲ್ಲದೆ 2021ರ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…