ನವದೆಹಲಿ:ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಸಂಸದ ಸೌಮಿತ್ರ ಖಾನ್ ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಸಂಸದ ಸೌಮಿತ್ರ ಖಾನ್ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಅಧ್ಯಕ್ಷ ಮುಖಲ್ ರಾಯ್ ಉಪಸ್ಥಿತರಿದ್ದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸೌಮಿತ್ರ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದರು.
ಸೌಮಿತ್ರ ಟಿಎಂಸಿಯ ಹಿರಿಯ ನಾಯಕರು ಆಗಿದ್ದಾರೆ. ಇವರ ಜೊತೆ ಟಿಎಂಸಿಯ ಐವರು ಸಂಸದರು ಸಂಪರ್ಕದಲ್ಲಿ ಇದ್ದಾರೆ ಎನ್ನಲಾಗಿದೆ. ಸೌಮಿತ್ರ ಪಕ್ಷ ತೊರೆದಿರುವುದು ಟಿಎಂಸಿಗೆ ಹಿನ್ನಡೆಯಾದಂತೆ ಎಂದೇ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡುವ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಟಿಎಂಸಿಯ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಕಳೆದೊಂದು ವಾರದಲ್ಲಿ 2000ಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ ಎಂದು ಸ್ಥಳೀಯ ಸುದ್ದಿವಾಹಿಗಳು ವರದಿ ಮಾಡಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…