Featured

ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು – vishwanews24

ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು

ಕೊಪ್ಪಳ : ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಧಾರವಾಡದ ಹೈಕೋರ್ಟ್‌ ಪೀಠವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಪ್ರತಿಯೊಬ್ಬರಿಂದ 50 ಸಾವಿರ ರೂ.ಬೆಲೆಯ ಬಾಂಡ್ ಹಾಗೂ ಒಬ್ಬ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ನಂತರ ದಲಿತರ ಓಣಿಗೆ ಹೋಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಆರೋಪಿಗಳ ವಿರುದ್ದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿತ್ತು. ಅದರಂತೆ 101 ಜನರ ಅಪರಾಧಿಗಳಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ, 5 ವರ್ಷ ದಂಡ ವಿಧಿಸಿತ್ತು. ಇನ್ನೂ ಮೂವರು ಅಪರಾಧಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದರಿಂದಾಗಿ ಜಾತಿ ನಿಂದನೆ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಈ 3 ಜನರಿಗೆ 5 ವರ್ಷ ಜೈಲು ಶಿಕ್ಷೆ, 2 ಸಾವಿರ ರೂ. ದಂಡ ವಿಧಿಸಲಾಗಿತ್ತು.

Vishwa News 24

Recent Posts

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 minutes ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

25 minutes ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

37 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

44 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

52 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

4 hours ago