Featured

ಮರಗಳನ್ನು ಕಡಿಯುವುದನ್ನು ನಿಲ್ಲಿಸಿ : ಹೆಚ್.ಡಿ.ಕುಮಾರಸ್ವಾಮಿ -Vishwanews24

ಮಡಿಕೇರಿ: ಖಾಸಗಿ ವ್ಯಕ್ತಿಯೊಬ್ಬರು ನಗರದ ಹೊರಭಾಗದಲ್ಲಿರುವ ಕೆ.ನಿಡುಗಡೆ ಗ್ರಾಮದಲ್ಲಿ ನೂರಾರು ಮರಗಳನ್ನು ಕಡಿದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆದೇಶವೊಂದನ್ನು ಹೊರಡಿಸಿ ಮರಗಳನ್ನು ಕಡಿಯುವುದನ್ನು ತಕ್ಷಣ ನಿಲ್ಲಿಸಬೇಕೆಂದು ಸೂಚನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ಕೆ.ನಿಡುಗಡೆ ಗ್ರಾಮದ 68 ಏಕರೆ ಜಾಗದ ಪೈಕಿ 30 ಏಕರೆಯಲ್ಲಿದ್ದ 890 ಮರಗಳನ್ನು ಹನನ ಮಾಡಲಾಗಿದೆ ಎಂದು ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಅವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಸರ್ಕಾರದ ಗಮನವನ್ನೂ ಸೆಳೆದಿದ್ದರು.

ರೆಸಾರ್ಟ್ ನಿರ್ಮಾಣಕ್ಕಾಗಿ ಈ ಮರಗಳನ್ನು ಕಡಿಯಲಾಗಿದೆ ಎನ್ನುವ ಆರೋಪವೂ ಕೇಳಿ ಬಂದಿತ್ತು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

22 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

22 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

22 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

23 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago