Featured

ಮರಳಿನ ಸಮಸ್ಯೆ ಬಗೆಹರಿಯದಿದ್ದರೆ ಮತದಾನ ಪ್ರತಿಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ – Vishwanews24

ಉಡುಪಿ: ಜಿಲ್ಲೆಯ ಮರಳಿನ ಸಮಸ್ಯೆ ಬಗೆಹರಿಯಬೇಕು. ಇಲ್ಲದಿದ್ದರೆ ಮತದಾನ ಪ್ರತಿಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕಟಪಾಡಿ ಟೆಂಪೋ ಹಾಗೂ ಲಾರಿ ಮಾಲೀಕರ ಸಂಘದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಜಿಲ್ಲಾಡಳಿತ ಮರಳು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಮತ ಹಾಕುವುದು ಬಿಡುವುದು ನಮ್ಮ ವೈಯಕ್ತಿಕ ವಿಚಾರ. ಮತ ಹಾಕದಿದ್ದರೆ ನಿಮ್ಮ ಮೇಲೆ ಕ್ರಮ ಜರುಗಿಸುತ್ತೇನೆ ಎಂದು ಡಿಸಿ ಹೇಳುತ್ತಾರೆ. ಅವರು ಕ್ರಮ ಜರುಗಿಸಲಿ. ನಮ್ಮನ್ನು ಜೈಲಿಗೆ ಹಾಕಿದರೂ ಪರವಾಗಿಲ್ಲ. ಅಲ್ಲಿಯಾದರೂ ನಾವು ನೆಮ್ಮದಿಯಿಂದ ಬದುಕುತ್ತೇವೆ. ಮರಳು ಸಮಸ್ಯೆಯನ್ನು ಶೀಘ್ರ ಬಗೆಹರಿಯಬೇಕು. ಇಲ್ಲದಿದ್ದರೆ ನಾವು ಜೀವ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮರಳು ಧಕ್ಕೆಯಲ್ಲಿ ಸಿಸಿಟಿವಿ ಅಳವಡಿಸಿ, ಆಗ ಯಾರು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬುವುದು ಬಹಿರಂಗಗೊಳ್ಳುತ್ತದೆ. ಜಿಲ್ಲಾಧಿಕಾರಿಗಳ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ. ಲಂಚ ಸ್ವೀಕರಿಸುವ ಮೂಲಕ ಜಿಲ್ಲಾಡಳಿತವೇ ನೇರವಾಗಿ ಅಕ್ರಮಗಳಿಗೆ ಪೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿದರು.

ಜಿಲ್ಲೆಯ ಜನಪ್ರತಿನಿಧಿಗಳು ಜನರ ಸಮಸ್ಯೆಯನ್ನು ನಿವಾರಿಸುವಲ್ಲಿ ವಿಫಲರಾಗಿದ್ದಾರೆ. ನಾವು ಮತ ಹಾಕಿ ಜನಪ್ರತಿನಿಧಿಗಳನ್ನು ಗೆಲ್ಲಿಸುವುದು ಎಸಿ ರೂಮ್‌ನಲ್ಲಿ ಕೂತು ಗಮ್ಮತ್‌ ಮಾಡಲಿಕ್ಕಲ್ಲ. ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಅವರು ಮರಳಿನ ವಿಚಾರ ಕೇಳಿದರೆ ಮುಖ ತಿರುಗಿಸುತ್ತಾರೆ. ಇವರಿಗೆ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ, ಇವರು ಜನಪ್ರತಿನಿಧಿಗಳಾಗಿ ಇದ್ದು ಏನು ಪ್ರಯೋಜನ?. ಬಡಜನರ ಬಗ್ಗೆ ಕಿಂಚಿತ್‌ ಕಾಳಜಿ ಇಲ್ಲದಿರುವ ಇಂತಹ ಜನಪ್ರತಿನಿಧಿಗಳು ಸಚಿವ ಸ್ಥಾನದಲ್ಲಿ ಮುಂದುವರಿಯಲು ಅನಾರ್ಹರು ಎಂದು ಸಚಿವೆ ಜಯಮಾಲ ವಿರುದ್ಧ ಕಿಡಿಕಾರಿದರು.

ಮರಳು ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಸತ್ಯಜಿತ್‌ ಬಿರ್ತಿ ಮಾತನಾಡಿ, ಜಿಲ್ಲೆಯ ಮರಳಿನ ವಿಚಾರದಲ್ಲಿ ಅಧಿಕಾರಿಗಳೇ ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಜನಪ್ರತಿನಿಧಿಗಳ ಮಾತಿಗೆ ಕಿಮ್ಮತ್ತಿಲ್ಲ. ಹಾಗಾಗಿ ಮರಳಿನ ಸಮಸ್ಯೆ ಬಗೆಹರಿಯುವ ತನಕ ಸ್ವಯಂ ಪ್ರೇರಿತರಾಗಿ ಕುಟುಂಬದ ಎಲ್ಲ ಸದಸ್ಯರು ಮತ ಹಾಕದಿರಲು ನಿರ್ಧರಿಸಿದ್ದೇವೆ ಎಂದರು. ಜಿಲ್ಲಾ ಲಾರಿ ಮತ್ತು ಟೆಂಪೋ ಮಾಲೀಕರ ಸಂಘದ ಅಧ್ಯಕ್ಷ ಪ್ರವೀಣ್‌ ಸುವರ್ಣ, ಕಟಪಾಡಿ ಲಾರಿ–ಟೆಂಪೋ ಮಾಲೀಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಇದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago