ಉಡುಪಿ: ಜಿಲ್ಲೆಯ ಮರಳಿನ ಸಮಸ್ಯೆ ಬಗೆಹರಿಯಬೇಕು. ಇಲ್ಲದಿದ್ದರೆ ಮತದಾನ ಪ್ರತಿಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕಟಪಾಡಿ ಟೆಂಪೋ ಹಾಗೂ ಲಾರಿ ಮಾಲೀಕರ ಸಂಘದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಜಿಲ್ಲಾಡಳಿತ ಮರಳು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಮತ ಹಾಕುವುದು ಬಿಡುವುದು ನಮ್ಮ ವೈಯಕ್ತಿಕ ವಿಚಾರ. ಮತ ಹಾಕದಿದ್ದರೆ ನಿಮ್ಮ ಮೇಲೆ ಕ್ರಮ ಜರುಗಿಸುತ್ತೇನೆ ಎಂದು ಡಿಸಿ ಹೇಳುತ್ತಾರೆ. ಅವರು ಕ್ರಮ ಜರುಗಿಸಲಿ. ನಮ್ಮನ್ನು ಜೈಲಿಗೆ ಹಾಕಿದರೂ ಪರವಾಗಿಲ್ಲ. ಅಲ್ಲಿಯಾದರೂ ನಾವು ನೆಮ್ಮದಿಯಿಂದ ಬದುಕುತ್ತೇವೆ. ಮರಳು ಸಮಸ್ಯೆಯನ್ನು ಶೀಘ್ರ ಬಗೆಹರಿಯಬೇಕು. ಇಲ್ಲದಿದ್ದರೆ ನಾವು ಜೀವ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮರಳು ಧಕ್ಕೆಯಲ್ಲಿ ಸಿಸಿಟಿವಿ ಅಳವಡಿಸಿ, ಆಗ ಯಾರು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬುವುದು ಬಹಿರಂಗಗೊಳ್ಳುತ್ತದೆ. ಜಿಲ್ಲಾಧಿಕಾರಿಗಳ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ. ಲಂಚ ಸ್ವೀಕರಿಸುವ ಮೂಲಕ ಜಿಲ್ಲಾಡಳಿತವೇ ನೇರವಾಗಿ ಅಕ್ರಮಗಳಿಗೆ ಪೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿದರು.
ಜಿಲ್ಲೆಯ ಜನಪ್ರತಿನಿಧಿಗಳು ಜನರ ಸಮಸ್ಯೆಯನ್ನು ನಿವಾರಿಸುವಲ್ಲಿ ವಿಫಲರಾಗಿದ್ದಾರೆ. ನಾವು ಮತ ಹಾಕಿ ಜನಪ್ರತಿನಿಧಿಗಳನ್ನು ಗೆಲ್ಲಿಸುವುದು ಎಸಿ ರೂಮ್ನಲ್ಲಿ ಕೂತು ಗಮ್ಮತ್ ಮಾಡಲಿಕ್ಕಲ್ಲ. ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಅವರು ಮರಳಿನ ವಿಚಾರ ಕೇಳಿದರೆ ಮುಖ ತಿರುಗಿಸುತ್ತಾರೆ. ಇವರಿಗೆ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ, ಇವರು ಜನಪ್ರತಿನಿಧಿಗಳಾಗಿ ಇದ್ದು ಏನು ಪ್ರಯೋಜನ?. ಬಡಜನರ ಬಗ್ಗೆ ಕಿಂಚಿತ್ ಕಾಳಜಿ ಇಲ್ಲದಿರುವ ಇಂತಹ ಜನಪ್ರತಿನಿಧಿಗಳು ಸಚಿವ ಸ್ಥಾನದಲ್ಲಿ ಮುಂದುವರಿಯಲು ಅನಾರ್ಹರು ಎಂದು ಸಚಿವೆ ಜಯಮಾಲ ವಿರುದ್ಧ ಕಿಡಿಕಾರಿದರು.
ಮರಳು ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಸತ್ಯಜಿತ್ ಬಿರ್ತಿ ಮಾತನಾಡಿ, ಜಿಲ್ಲೆಯ ಮರಳಿನ ವಿಚಾರದಲ್ಲಿ ಅಧಿಕಾರಿಗಳೇ ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಜನಪ್ರತಿನಿಧಿಗಳ ಮಾತಿಗೆ ಕಿಮ್ಮತ್ತಿಲ್ಲ. ಹಾಗಾಗಿ ಮರಳಿನ ಸಮಸ್ಯೆ ಬಗೆಹರಿಯುವ ತನಕ ಸ್ವಯಂ ಪ್ರೇರಿತರಾಗಿ ಕುಟುಂಬದ ಎಲ್ಲ ಸದಸ್ಯರು ಮತ ಹಾಕದಿರಲು ನಿರ್ಧರಿಸಿದ್ದೇವೆ ಎಂದರು. ಜಿಲ್ಲಾ ಲಾರಿ ಮತ್ತು ಟೆಂಪೋ ಮಾಲೀಕರ ಸಂಘದ ಅಧ್ಯಕ್ಷ ಪ್ರವೀಣ್ ಸುವರ್ಣ, ಕಟಪಾಡಿ ಲಾರಿ–ಟೆಂಪೋ ಮಾಲೀಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಇದ್ದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…