Featured

ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ : ಪ್ರಮೋದ್‌ ಮಧ್ವರಾಜ್‌ – Vishwanews24

ಉಡುಪಿ: ಕೇಂದ್ರ ಸರಕಾರದ ತಪ್ಪು ನೀತಿಯಿಂದ ಇಂದು ಉಡುಪಿ ಜಿಲ್ಲೆಯ ಜನತೆಗೆ ಮರಳು ಲಭಿಸುತ್ತಿಲ್ಲ. ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಆ ಪ್ರಕ್ರಿಯೆ ಮುಗಿದ ತತ್‌ಕ್ಷಣ ಜಿಲ್ಲಾಧಿಕಾರಿ ನೇತೃತ್ವದ 7 ಜನ ಸದಸ್ಯರ ಸಭೆಯನ್ನು ಕರೆಸಿ ಜಿಲ್ಲೆಯಲ್ಲಿ ರಾಜ್ಯ ಸರಕಾರ ಗುರುತಿಸಿದ 7.38 ಲಕ್ಷ ಟನ್‌ ಮರಳನ್ನು ತೆರವುಗೊಳಿಸಲು ಪರವಾನಿಗೆ ದಾರರನ್ನು ನೇಮಿಸಿ ಜನರಿಗೆ ಮರಳು ಲಭ್ಯವಾಗು ವಂತೆ ಮಾಡುವಲ್ಲಿ ನಾನು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ಕುಂದಾಪುರದಲ್ಲಿ ನಡೆದ ಚುನಾವಣ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹಾರಾಡಿಯ ಕುಕ್ಕುಡೆ ಗ್ರಾಮಸ್ಥರ ಪರವಾಗಿ ಕೆಲವು ಗ್ರಾಮಸ್ಥರು ಅಕ್ರಮ ಮರಳುಗಾರಿಕೆ ವಿರುದ್ಧ ಹಸಿರು ಪೀಠ ನ್ಯಾಯಾಧಿಕರಣಕ್ಕೆ ದೂರು ಸಲ್ಲಿಸಿರುವುದರಿಂದ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆಗೆ ಹಸಿರು ನ್ಯಾಯಪೀಠ ತಡೆಯಾಜ್ಞೆ ನೀಡಿತ್ತು. ಹಲವು ತಿಂಗಳುಗಳ ಕಾಲ ಮರಳು ಸಿಗದೆ ಕಟ್ಟಡ ಕಾರ್ಮಿಕರಿಗೆ ಮತ್ತು ಜನರಿಗೆ ತುಂಬಾ ತೊಂದರೆ ಆಗಿತ್ತು. ಅದನ್ನು ಮನಗಂಡು ತಾನು ಸಚಿವನಾಗಿದ್ದಾಗ ಆಗಿನ ರಾಜ್ಯದ ಕಾನೂನು ಮಂತ್ರಿ ಟಿ.ಬಿ. ಜಯಚಂದ್ರ ಹಾಗೂ ರಾಜ್ಯ ಸರಕಾರದ ವಕೀಲರಾದ ಅಶೋಕ್‌ ದೇವರಾಜ್‌ ಅವರಲ್ಲಿ ನಿರಂತರ ಸಂಪರ್ಕವಿರಿಸಿ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆಗೆ ಇದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವಲ್ಲಿ ಅವಿರತ ಶ್ರಮಪಟ್ಟಿದ್ದೇನೆ. ಅದರ ಫ‌ಲಶ್ರುತಿಯಾಗಿ 2017-18ರಲ್ಲಿ 27 ಮರಳು ದಿಬ್ಬಗಳನ್ನು ಗುರುತಿಸಿ 9 ಲಕ್ಷ ಟನ್‌ ಮರಳು ತೆರವುಗೊಳಿಸುವ ಕಾರ್ಯ ಪ್ರಾರಂಭಗೊಂಡು 165 ಪರವಾನಿಗೆದಾರರನ್ನು ನೋಂದಾಯಿಸಿ ಸುಮಾರು 6 ಲಕ್ಷ ಟನ್‌ ಮರಳು ತೆರವುಗೊಳಿಸಲಾಗಿದೆ ಎಂದು ಪ್ರಮೋದ್‌ ತಿಳಿಸಿದರು.

ಉಡುಪಿ ಜಿಲ್ಲೆಯ ಜನತೆಗೆ ಸಕಾಲದಲ್ಲಿ ಮರಳು ಸಿಗಬೇಕೆಂಬ ನನ್ನ ನಿರ್ಧಾರ ಅಚಲವಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ರಘುಪತಿ ಭಟ್ಟರು ತಾನು ಶಾಸಕನಾದರೆ ಒಂದು ತಿಂಗಳ ಒಳಗೆ ಮನೆ ಬಾಗಿಲಿಗೆ ತಂದು ಮರಳು ಕೊಡುತ್ತೇನೆ ಎಂದು ಹೇಳಿದವರು 11 ತಿಂಗಳಾದರೂ ಮರಳು ಜನರಿಗೆ ಲಭ್ಯವಾಗಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ. ದೋಣಿ ಮತ್ತು ಲಾರಿಗಳಿಗೆ ಹಾಕಿದ ಜಿಪಿಎಸ್‌ ಅನ್ನು ಪ್ರಮೋದ್‌ ಮಧ್ವರಾಜರ ಮನೆಗೆ ತಂದು ಎಸೆಯಿರಿ ಎಂದಿದ್ದಾರೆ. ಜಿಪಿಎಸ್‌ ಜಾರಿಯಾಗಿದ್ದು 2012ರಲ್ಲಿ. ಆಗ ರಘುಪತಿ ಭಟ್ಟರೇ ಶಾಸಕರಾಗಿದ್ದರು. ನಾನು ಶಾಸಕನಾಗಿದ್ದು 2013ರಲ್ಲಿ ಎಂದು ನೆನಪಿಸಿದರು. ಈ ವರ್ಷ ಕೇವಲ 7 ಮರಳು ದಿಬ್ಬಗಳನ್ನು ಗುರುತಿಸಿ ಕೇವಲ 45 ಪರವಾನಿಗೆದಾರರನ್ನು ನೋಂದಾಯಿಸಿ, ಕೇವಲ 17,000 ಟನ್‌ ಮರಳು ಮಾತ್ರ ತೆರವುಗೊಳಿಸಲಾಗಿದೆ ಎಂದರು.

 

Vishwa News 24

Recent Posts

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

4 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

13 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago